ಉಳ್ಳಾಲ : ಬೆಳ್ಳಂಬೆಳಗ್ಗೆ ಮಂಗಳೂರು ಹೊರವಲಯದ ತೊಕ್ಕೊಟ್ಟು ಫೈಓವರ್ ಮೇಲೆ ರೌಡಿಶೀಟರ್ ಓರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ.
ತಲಪಾಡಿ,ಉಚ್ಚಿಲ ಮುಳ್ಳುಗುಡ್ಡೆ ಹೌಸ್ ನಿವಾಸಿ ಆರಿಫ್ ಹುಸೇನ್ (42) ಅಲಿಯಾಸ್ ಟ್ಯಾಬ್ಲೆಟ್ ಆರಿಫ್ ಕೊಲೆಯಾದ ರೌಡಿಶೀಟರ್, ಇಂದು ನಸುಕಿನ ಜಾವ 3:30 ಕ್ಕೆ ಈ ಕೊಲೆ ನಡೆದಿದೆ.ಆರೀಫ್ ಮಂಗಳೂರಿನ ಬಂದರು ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದಾನೆ.

ಅರಿಫ್ ಮಂಗಳೂರಿನ ಧಕ್ಕೆಯಲ್ಲಿ ಮೀನಿನ ವ್ಯಾಪಾರ ನಡೆಸುತ್ತಿದ್ದು ಇಂದು ಮುಂಜಾನೆ ತನ್ನ ಬುಲೆಟ್ ಬೈಕಿನಲ್ಲಿ ತನ್ನ ಮನೆಯಿಂದ ಮಂಗಳೂರು ಕಡೆಗೆ ತೆರೆಲುತ್ತಿದ್ದ ವೇಳೆ ತೊಕೊಟ್ಟು ಫ್ಲೈ ಓವರ್ ನಲ್ಲಿ ಕಾರಿನಲ್ಲಿ ಕಾದು ಕುಳಿತಿದ್ದ ತಂಡವು ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ.

ಕಳೆದ 2022ರ ಮೇ ತಿಂಗಳಲ್ಲಿ ಆರೀಫ್ ಇದೇ ರೀತಿ ಮುಂಜಾನೆ ಬೈಕಲ್ಲಿ ಧಕ್ಕೆಗೆ ತೆರಳುತ್ತಿದ್ದ ವೇಳೆ ಟೊಪ್ಪಿ ನೌಫಾಲ್ ತಂಡವು ದಾಳಿ ನಡೆಸಿ ಚೂರಿ ಇರಿದು ಕೊಲೆಗೆ ಯತ್ನಿಸಿತ್ತು.

ವಿವಾಹಿತನಾಗಿರುವ ಆರೀಫ್ ಮೂಲತ: ಕುದ್ರೋಳಿ ನಿವಾಸಿಯಾಗಿದ್ದು ಕಳೆದ ಆರೇಳು ವರುಷದಿಂದ ಕುಟುಂಬ ಸಮೇತ ಅಜ್ಜಿನಡ್ಕ ಮುಳ್ಳುಗುಡ್ಡೆ ಎಂಬಲ್ಲಿ ಮನೆ ಮಾಡಿ ವಾಸವಿದ್ದ. ಮೃತ ಆರೀಫ್ ಪತ್ನಿ ಮೂರು ಗಂಡು, ಒಂದು ಹೆಣ್ಣು ಮಕ್ಕಳನ್ನ ಅಗಲಿದ್ದಾನೆ. ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿಸಿಪಿ ಮಿಥುನ್ ಹೆಚ್.ಎನ್. ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.


