ಮಂಗಳೂರು : ನಗರದ ಕುಂಜತ್ತಬೈಲ್ ನ ಕೊಂರ್ಗಿಬೈಲ್ ಅರ್ತಿವೊಡಲು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವವು ಏಪ್ರಿಲ್ ೬ ರಿಂದ ೧೨ ರ ತನಕ ವಿವಿಧ ವೈದಿಕ , ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಆಶಿಕ್ ಬಲ್ಲಾಳ್ ತಿಳಿಸಿದರು.

ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅರ್ತಿವೊಡಲು ಗ್ರಾಮದ ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವವು ಏಪ್ರಿಲ್ 12 ಆದಿತ್ಯವಾರ ಪೂರ್ವಾಹ್ನ 8:20ರಿಂದ 10:00 ಗಂಟೆಯೊಳಗಿನ ವೃಷಭ ಲಗ್ನ ಸುಮುಹೂರ್ತದಲ್ಲಿ ನೆರವೇರಲಿದೆ. ಈ ಮಹೋತ್ಸವದ ಅಂಗವಾಗಿ ಏಪ್ರಿಲ್ 6 ರಿಂದ ವೇದಮೂರ್ತಿ ಬ್ರಹ್ಮಶ್ರೀ ಕುಡುಪು ನರಸಿಂಹ ತಂತ್ರಿಗಳವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಸತ್ಕರ್ಮಗಳು ಆರಂಭಗೊಳ್ಳಲಿವೆ. ಅದರೊಂದಿಗೆ ಹಲವು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ಆಯೋಜಿಸಲಾಗಿವೆ ಎಂದು ತಿಳಿಸಿದರು

ಪತ್ರಿಕಾಗೋಷ್ಠಿಯಲ್ಲಿ ಆಡಳಿತ ಮೊಕೇಸ್ತರಾದ ಡಾ|ನರೇಶ್ ರೈ,ದೆಪ್ಪುಣಿಗುತ್ತು ,ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ವಿಠಲ ಆಳ್ವ, ದೀಪಕ್ ಪೂಜಾರಿ, ಸದಸ್ಯರಾದ ಜಗದೀಶ್ ಶೆಟ್ಟಿ ಮುರ ಮುಂತಾದವರು ಉಪಸ್ಥಿತರಿದ್ದರು .

