ಮಂಗಳೂರು : ಇಂದು ಬೆಳಂಬೆಳಿಗ್ಗೆ ತೊಕೊಟ್ಟು ಫ್ಲೈ ಓವರ್ ಮೇಲೆ ರೌಡಿಶೀಟರ್ ಆರಿಫ್ ಅಲಿಯಾಸ್ ಟಾಬ್ಲೆಟ್ ಆರಿಫ್ ಕೊಲೆ ಮಾಡಿದ ತಂಡ ನಂತರ ಕಾರಿನಲ್ಲಿ ಪರಾರಿಯಾಗಿದ್ದು, ಕೃತ್ಯಕ್ಕೆ ಬಳಸಲಾಗಿದ್ದ ಕಾರು ವಿಟ್ಲ ಠಾಣಾ ವ್ಯಾಪ್ತಿಯ ಬುಡೋಳಿ ಎಂಬಲ್ಲಿ ಪತ್ತೆಯಾಗಿದ್ದು. ಕಾರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರಿಫ್ನನ್ನು ಬೈಕ್ನಿಂದ ಕೆಡವಿ ಹತ್ಯೆ ಮಾಡಿದ ಬಳಿಕ ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದರು,ನಂತರ ಆರೋಪಿಗಳು ಕಾರನ್ನು ಬಡೋಳಿ ಸಮೀಪ ಬಿಟ್ಟು ಬೇರೆ ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ ನೇತೃತ್ವದ ತಂಡ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.


