ಬಂಟ್ವಾಳ : ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ತಾಯಿ,ಮಗಳು ರಸ್ತೆ ದಾಟುತ್ತಿದ್ದ ಸಂಧರ್ಭದಲ್ಲಿ ತಾಯಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ಅಪಘಾತ ದಾಖಲಿಸಲಾಗಿದೆ.

ಸಜೀಪ ಬೋಳಿಯಾರು ಗ್ರಾಮದ ಭಾರತಿ (48) ಎಂಬುವವರೇ ಗಾಯಗೊಂಡ ಮಹಿಳೆ. ಇವರು ಬೆಳಗ್ಗೆ ಮಗಳು ದೀಪಶ್ರೀ ಅವರೊಂದಿಗೆ ಗುಳಿಗಜ್ಜ ಕಟ್ಟೆಗೆ ಕಾಣಿಕೆ ಹಾಕುವ ಸಲುವಾಗಿ ಬಂದಿದ್ದರು. ಮೆಲ್ಕಾರ್- ಮುಡಿಪು ರಾಜ್ಯ ಹೆದ್ದಾರಿಯನ್ನು ದಾಟಿ ರಸ್ತೆಯ ಅಂಚಿಗೆ ತಲುಪುತ್ತಿದ್ದಂತೆ, ಮೆಲ್ಕಾರ್ ಕಡೆಯಿಂದ ಮುಡಿಪು ಕಡೆಗೆ ಅತೀ ವೇಗವಾಗಿ ಬರುತ್ತಿದ್ದ ಕಾರು ಇವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಭಾರತಿ ಅವರು ರಸ್ತೆಗೆ ಎಸೆಯಲ್ಪಟ್ಟಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

