ಚಿತ್ರದುರ್ಗ : ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಬಿಎಎಂಎಸ್ ವಿದ್ಯಾರ್ಥಿನಿ ಲಿಖಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಾಧ್ಯಾಪಕರೊಂದಿಗಿನ ಸಂಬಂಧದ ಕುರಿತ ಸುಳ್ಳು ಅಪಪ್ರಚಾರಕ್ಕೆ ಮನನೊಂದು ಈ ನಿರ್ಧಾರ ಕೈಗೊಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ನಗರದ ಬಸವ ಲೇಔಟ್ನಲ್ಲಿ ನಿವಾಸಿ 23 ವರ್ಷದ ನಿಖಿತಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಬಿಎಎಂಎಸ್ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದರು. ಬುಧವಾರ ರಾತ್ರಿ ತನ್ನ ನಿವಾಸದಲ್ಲಿ ನಿಖಿತಾ ನೇಣಿಗೆ ಶರಣಾಗಿದ್ದಾಳೆ.ಈ ಸಂಬಂಧ ಡೆತ್ ನೋಟ್ ಸಿಕ್ಕಿದ್ದು ಅದರಲ್ಲಿ ಸಾವಿಗೆ ನಿಖರ ಕಾರಣಗಳನ್ನ ತಿಳಿಸಲಾಗಿದೆ.
ನಿಖಿತಾ ಸಾವಿಗೂ ಮುನ್ನ ಬರೆದಿದ್ದ ಎಂಟು ಪುಟಗಳ ಡೆತ್ನೋಟ್ ಪತ್ತೆಯಾಗಿದ್ದು, ಅದರಲ್ಲಿ ತನ್ನ ಮೇಲಾಗಿದ್ದ ಮಾನಸಿಕ ಕಿರುಕುಳದ ಬಗ್ಗೆ ತಿಳಿಸಿದ್ದಾಳೆ.ಡೆತ್ನೋಟ್ನಲ್ಲಿ ಪ್ರಮುಖವಾಗಿ ಅಧ್ಯಾಪಕ ಡಾ.ರಾಜು, ಅವರ ಪತ್ನಿ ನಿಶಾ ಹಾಗೂ ಕಾಲೇಜಿನ ಕೆಲವು ಸಹಪಾಠಿ ವಿದ್ಯಾರ್ಥಿನಿಯರ ಹೆಸರುಗಳನ್ನು ಬರೆಯಲಾಗಿದೆ. ಇವರೆಲ್ಲರೂ ಸೇರಿ ತನ್ನ ಚಾರಿತ್ರ್ಯದ ಬಗ್ಗೆ ಇಲ್ಲಸಲ್ಲದ ಮಾತುಗಳನ್ನಾಡಿ ಸಾರ್ವಜನಿಕವಾಗಿ ಅವಮಾನ ಮಾಡಿದ್ದಾರೆ ಎಂದು ನಿಖಿತಾ ಆರೋಪಿಸಿದ್ದಾಳೆ.
ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಹೊಳಲ್ಕೆರೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಡೆತ್ನೋಟ್ ನಲ್ಲಿರುವ ಸಾಕ್ಷ್ಯಗಳ ಆಧಾರದ ಮೇಲೆ ಅಧ್ಯಾಪಕ ರಾಜು, ಆತನ ಪತ್ನಿ ನಿಶಾ ಮತ್ತು ಕೆಲವು ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

