ಮಂಗಳೂರು:2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಆಳ್ವಾಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ದಿಶಾ 600ಕ್ಕೆ 600 ಅಂಕಗಳನ್ನು ಪಡೆದು ರಾಜ್ಯದಲ್ಲೇ ಪ್ರಥಮ ಸ್ಥಾನವನ್ನು ಅಲಂಕರಿಸಿದ್ದಾರೆ. ಅವರು ವಾಣಿಜ್ಯ ವಿಭಾಗದಲ್ಲಿ ಸಂಪೂರ್ಣ ಅಂಕಗಳನ್ನು ಗಳಿಸಿ ಸಾಧನೆ ಮಾಡಿದ್ದಾರೆ.
ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದೂ ಪಿಯು ಕಾಲೇಜಿನ ಕಲಾ ವಿಭಾಗದ ಇಬ್ಬರು ವಿದ್ಯಾರ್ಥಿನಿಯರು 598 ಅಂಕಗಳನ್ನು ಪಡೆಯುವ ಮೂಲಕ ದ್ವಿತೀಯ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಸಂಗೀತಾ ಮತ್ತು ಅರ್ಚನಾ ಇವರು ಕಲಾ ವಿಭಾಗದಲ್ಲಿ ತಲಾ 598 ಅಂಕಗಳೊಂದಿಗೆ ರಾಜ್ಯ ಮಟ್ಟದಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ. ಇಬ್ಬರೂ ವಿದ್ಯಾರ್ಥಿನಿಯರು ಕನ್ನಡ ಸಾಹಿತ್ಯ, ಇತಿಹಾಸ, ರಾಜ್ಯಶಾಸ್ತ್ರ, ಮನೋವಿಜ್ಞಾನ ಮುಂತಾದ ವಿಷಯಗಳಲ್ಲಿ ಉನ್ನತ ಅಂಕಗಳನ್ನು ಗಳಿಸಿದ್ದಾರೆ.
ಪ್ರಕಟವಾದ ಅಂಕಿಅಂಶಗಳ ಪ್ರಕಾರ, ರಾಜ್ಯದಲ್ಲಿ ಈ ಬಾರಿ ಶೇ. 86% ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಇದು ಸುಮಾರು 12% ರಷ್ಟು ಹೆಚ್ಚಳವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯೇ ಅತ್ಯಧಿಕ ಪಾಸಿಂಗ್ ಶೇಕಡಾವಾರು ಪ್ರಮಾಣವನ್ನು ದಾಖಲಿಸಿದೆ

