ಮಂಗಳೂರು : ಆಧುನಿಕ ಯುಗದಲ್ಲಿ ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನಗಳಲ್ಲಿ ಕೃತಕ ಬುದ್ಧಿಮತ್ತೆ (AI) ಪ್ರಮುಖ ಸ್ಥಾನ ಪಡೆದಿದ್ದು, ಇದು ವೈದ್ಯಕೀಯ ಕ್ಷೇತ್ರಕ್ಕೆ ಸ್ಪರ್ಧಾತ್ಮಕ ಸವಾಲಾಗಿ ಹೊರಹೊಮ್ಮುತ್ತಿದೆ ಎಂದು ಸಚಿವ ಡಾ. ಶರಣ್ ಪ್ರಕಾಶ ಪಾಟೀಲ್ ಅಭಿಪ್ರಾಯಪಟ್ಟರು.
ನಗರದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಕೃತಕ ಬುದ್ಧಿಮತ್ತೆ ವೈದ್ಯಕೀಯ ಸೇವೆಯ ಸ್ವರೂಪವನ್ನೇ ಬದಲಾಯಿಸುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ವೈದ್ಯ ವೃತ್ತಿಯಲ್ಲಿ ಮಾನವೀಯತೆ ಮತ್ತು ನೈತಿಕ ಮೌಲ್ಯಗಳನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದಿನೇಶ್ ಗುಂಡೂರಾವ್ ಮಾತನಾಡಿ, ಪಿಸಿಯೋಥೆರಪಿ ಕ್ಷೇತ್ರದಲ್ಲಿ ಮಹಿಳೆಯರಿಗೆ ಹೆಚ್ಚುತ್ತಿರುವ ಅವಕಾಶಗಳ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಕಾರ್ಪೋರೇಟ್ ವಲಯದ ಉದ್ಯೋಗ ಒತ್ತಡದಿಂದ ಉಂಟಾಗುವ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳಿಗೆ ಪಿಸಿಯೋಥೆರಪಿ ಪರಿಣಾಮಕಾರಿ ಚಿಕಿತ್ಸೆ ಆಗಿದ್ದು, ಈ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಅಲೈಡ್ ಮತ್ತು ಹೆಲ್ತ್ಕೇರ್ ಪ್ರೊಫೆಷನ್ನ ರಾಷ್ಟ್ರೀಯ ಆಯೋಗದ (ಎನ್ಸಿಎಎಚ್ಪಿ) ಅಧ್ಯಕ್ಷೆ ಡಾ. ಯಜ್ಞ ಉನ್ಮೇಶ್ ಶುಕ್ಲಾ ಮಾತನಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಭಗವಾನ್ ಬಿ.ಸಿ., ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ನ ಸಹಕುಲಪತಿ ಡಾ.ದಿಲೀಪ್ ನಾಯಕ್, ಇಂಡಿಯನ್ ಅಸೋಸಿಯೇಶನ್ ಆಫ್ ಫಿಸಿಯೋಥೆರಫಿಸ್ಟ್ನ ಅಂತಾರಾಷ್ಟ್ರೀಯ ವ್ಯವಹಾರಗಳ ಚೇರ್ ಮೆನ್ ಡಾ. ಅಲಿ ಇರಾನಿ, ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಯೋಥೆರಪಿಸ್ಟ್ನ ಅಧ್ಯಕ್ಷ ಡಾ. ಸಂಜೀವ್ ಕೆ. ಝಾ, ದಿ ಇಂಡಿಯನ್ ಅಸೋಸಿಯೇಶನ್ ಆಫ್ ಫಿಸಿಯೇಥೆರಪಿಸ್ಟ್ ರಾಷ್ಟ್ರೀಯ ಮಹಿಳಾ ವಿಭಾಗದ ಮುಖ್ಯಸ್ಥೆ ಡಾ. ರುಚಿ ವರ್ಸ್ನೇಯಿ, ಯೆನೆಪೋಯ ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ. ಯೆನೆಪೊಯ ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ. ಯೆನೆಪೊಯ ಅಬ್ದುಲ್ಲಾ ಕುಂಞಿ ಮೊದಲಾದವರು ಉಪಸ್ಥಿತರಿದ್ದರು.

