ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಿದ್ದಾರೆ.
ಬಾಲಗಂಗಾಧರನಾಥ ಸ್ವಾಮೀಜಿಯವರ ಗದ್ದುಗೆಯ ಸ್ಥಳದಲ್ಲಿ ನಿರ್ಮಿಸಲಾಗಿದೆ ಈ ಭವ್ಯ ಮಂದಿರವನ್ನು ಪ್ರಧಾನಿ ಮೋದಿ ಅವರು ಉದ್ಘಾಟಿಸಿದರು, ಸ್ವಾಮೀಜಿಗಳ ಮೂರ್ತಿಗೆ ಪೂಜೆ ಸಲ್ಲಿಸಿದ್ದಾರೆ.

ಈ ಮಂದಿರವು ದ್ರಾವಿಡ, ಚಾಲುಕ್ಯ, ಹೊಯ್ಸಳ ಮತ್ತು ಗಂಗರ ವಾಸ್ತುಶೈಲಿಯನ್ನು ಒಳಗೊಂಡಿದ್ದು, ಒಡಿಶಾದ ಸೂರ್ಯ ದೇವಾಲಯದ ನಿರ್ಮಾಣದಿಂದ ಪ್ರೇರಣೆ ಪಡೆದಿದೆ. ಸುಮಾರು ಹತ್ತು ವರ್ಷಗಳ ನಿರಂತರ ಪರಿಶ್ರಮದಿಂದ 80 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣವಾಗಿದೆ. ವಾಸ್ತುಶಿಲ್ಪಿ ಶಂಕರ್ ಸ್ಥಪತಿ ಅವರ ಮೇಲ್ವಿಚಾರಣೆಯಲ್ಲಿ ಈ ಮಂದಿರ ಮೂಡಿಬಂದಿದೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ಜೊತೆಗೆ ಮೋದಿ ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಕೇಂದ್ರ ಸಚಿವರು ಮತ್ತು ಇತರ ಗಣ್ಯರು.

ಪ್ರಧಾನಿ ಮೋದಿ ಅವರ ಈ ಭೇಟಿ ಮತ್ತು ಮಂದಿರದ ಲೋಕಾರ್ಪಣೆಯು ಆದಿಚುಂಚನಗಿರಿ ಮಠದ ಆಧ್ಯಾತ್ಮಿಕ ಮಹತ್ವವನ್ನು ಇನ್ನಷ್ಟು ಹೆಚ್ಚಿಸಿದೆ ಎಂದು ಹೇಳಿದರು ಭಕ್ತರು ಹೇಳುತ್ತಿದ್ದಾರೆ.
ಪ್ರಧಾನಿ ಆಗಮನದ ಮಠದ ಆವರಣ ಮತ್ತು ದೇವಾಲಯ ಪ್ರದೇಶಕ್ಕೆ ಸಾರ್ವಜನಿಕರಿಗೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಪ್ರಧಾನಿ ತೆರಳಿದ ನಂತರ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗುವುದು.

