ಬೆಂಗಳೂರು : ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೀಶ್ ಗೌಡ ಅವರ ಕೊಲೆ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿರುವ ಬಿಜೆಪಿ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕತ್ವವು ತಾನಾಗಿಯೇ ರದ್ದಾಗಿದೆ. ಈ ಕುರಿತು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಸ್ಪಷ್ಟನೆ ನೀಡಿದ್ದು, ಕಾನೂನಿನ ಪ್ರಕಾರ ಈ ಅನರ್ಹತೆ ಸ್ವಯಂಚಾಲಿತವಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್ ಖಾದರ್, “ವಿಧಾನಸಭೆಯ ಯಾವುದೇ ಸದಸ್ಯರು ಕಾನೂನಾತ್ಮಕವಾಗಿ ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾದಾಗ, ಅವರ ಶಾಸಕತ್ವ ತಾನಾಗಿಯೇ ರದ್ದಾಗುತ್ತದೆ. ಅದರಂತೆಯೇ ವಿನಯ್ ಕುಲಕರ್ಣಿ ಅವರ ಸದಸ್ಯ ಸ್ಥಾನವೂ ರದ್ದಾಗಿದೆ. ಈ ಸಂದರ್ಭದಲ್ಲಿ ಸ್ಪೀಕರ್ ಆಗಿ ನನಗೆ ಸದಸ್ಯತ್ವವನ್ನು ಪ್ರತ್ಯೇಕವಾಗಿ ರದ್ದುಪಡಿಸುವ ಯಾವುದೇ ಅಧಿಕಾರವಿಲ್ಲ. ಇದು ಕಾನೂನಿನ ಸ್ವಯಂಚಾಲಿತ ಪ್ರಕ್ರಿಯೆಯಾಗಿದೆ” ಎಂದು ವಿವರಿಸಿದರು

