ಬೆಂಗಳೂರು: ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ಕೇರಳದ 19 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ಹಾಸ್ಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮೃತ ಆದಿತ್ಯನ್ ಪಿಎ, ಬೊಮ್ಮಸಂದ್ರದ ನರ್ಸಿಂಗ್ ಕಾಲೇಜಿನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯಾಗಿದ್ದು, ಆತ ಕೇರಳದ ತಿರುವನಂತಪುರಂ ಜಿಲ್ಲೆಯ ಅರುವಿಕ್ಕರ ಮೂಲದವನಾಗಿದ್ದಾನೆ.
ಏಪ್ರಿಲ್ 29 ರಂದು, ಆತನ ಶವ ಮಲಗುವ ಕೋಣೆಯಲ್ಲಿ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು. ತಮ್ಮ ಸಾವಿಗೆ ಯಾರೂ ಕಾರಣರಲ್ಲ ಎಂದು ಆತ್ಮಹತ್ಯೆ ಪತ್ರವನ್ನು ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ವಿದ್ಯಾರ್ಥಿ ಖಿನ್ನತೆಯಿಂದ ಬಳಲುತ್ತಿರಬಹುದು ಎಂದು ತಿಳಿದು ಬಂದಿದ್ದು ನಡೆಯುತ್ತಿರುವ ವಿಚಾರಣೆಯ ಭಾಗವಾಗಿ ಇತರ ಸಂಭಾವ್ಯ ಸಮಸ್ಯೆಗಳನ್ನು ಸಹ ಪರಿಶೀಲಿಸಲಾಗುತ್ತಿದೆ. ಈ ಬಗ್ಗೆ ಹೆಬ್ಬಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

