ಕೊಲ್ಕತ್ತಾ : ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆಯನ್ನು ರಾಜ್ಯಪಾಲ ಆರ್.ಎನ್.ರವಿ ವಿಸರ್ಜಿಸಿದ್ದಾರೆ.
ಚುನಾವಣಾ ಸೋಲಿನ ನಂತರ ಈಗಾಗಲೇ ಅವರ ಅಧಿಕಾರಾವಧಿ ಮುಗಿದಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಿಸಿದ್ದರಿಂದ, ರಾಜ್ಯಪಾಲ ಆರ್.ಎನ್. ರವಿ, ಗುರುವಾರ ಪಶ್ಚಿಮ ಬಂಗಾಳ ವಿಧಾನಸಭೆಯನ್ನು ವಿಸರ್ಜಿಸಿದರು. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಹುಮತ ಕಳೆದುಕೊಂಡು ಅಧಿಕಾರಾವಧಿ ಮುಗಿದರೂ ರಾಜೀನಾಮೆ ನೀಡುವುದಿಲ್ಲ ಎಂದು ಪಟ್ಟು ಹಿಡಿದಿದ್ದ ಮಮತಾ ಬ್ಯಾನರ್ಜಿಗೆ ಕಾನೂನಿನ ಮೂಲಕವೇ ರಾಜ್ಯಪಾಲರು ಉತ್ತರ ನೀಡಿದ್ದಾರೆ.
ಟಿಎಂಸಿ ಬಹುಮತ ಕಳೆದುಕೊಂಡ ನಂತರ, ರಾಜ್ಯಪಾಲರು ಸರ್ಕಾರವನ್ನು ವಜಾಗೊಳಿಸಬಹುದು ಮತ್ತು ಬಹುಮತ ಹೊಂದಿರುವ ಪಕ್ಷದ ನಾಯಕನನ್ನು ಅಧಿಕಾರ ವಹಿಸಿಕೊಳ್ಳಲು ಆಹ್ವಾನಿಸಬಹುದು.ಹೀಗಾಗಿ ಬಿಜೆಪಿ ಸರ್ಕಾರ ರಚನೆಯಾಗಲು ಅವಕಾಶ ಸಿಕ್ಕಂತಾಗಿದೆ. ಮೇ 9ರಂದು ಬಂಗಾಳದಲ್ಲಿ ಬಿಜೆಪಿಯ ಮೊದಲ ಸರ್ಕಾರ ರಚನೆಯಾಗಲಿದೆ ಎನ್ನಲಾಗುತ್ತಿದೆ. ಆದರೆ, ಇನ್ನೂ ಬಿಜೆಪಿ ಸರ್ಕಾರ ರಚನೆಗೆ ರಾಜ್ಯಪಾಲರಿಗೆ ಹಕ್ಕು ಮಂಡನೆ ಮಾಡಿಲ್ಲ.

