ಕೊಲ್ಕತ್ತಾ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅವರನ್ನು ಘೋಷಿಸಿದ್ದಾರೆ ಐತಿಹಾಸಿಕ ಚುನಾವಣಾ ಗೆಲುವಿನ ನಂತರ ಬಿಜೆಪಿ ಪ.ಬಂಗಾಳದಲ್ಲಿ ತನ್ನ ಮೊದಲ ಸರ್ಕಾರವನ್ನು ರಚಿಸಲು ಸಜ್ಜಾಗಿದೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಅಭೂತಪೂರ್ವ ಫಲಿತಾಂಶದ ಹಿನ್ನೆಲೆಯಲ್ಲಿ, ಭಾರತೀಯ ಜನತಾ ಪಕ್ಷ ತನ್ನ ಮೊದಲ ಸರ್ಕಾರ ರಚನೆಗೆ ಸಜ್ಜಾಗಿದೆ. ಐತಿಹಾಸಿಕ ಗೆಲುವಿನೊಂದಿಗೆ ಪಾರ್ಟಿಯ ಹಿರಿಯ ನಾಯಕ ಸುವೆಂದು ಅಧಿಕಾರಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಮಮತಾ ಬ್ಯಾನರ್ಜಿ ಅವರ 10 ವರ್ಷಗಳ ಆಡಳಿತಕ್ಕೆ ತೆರೆ ಎಳೆದಂತಾಗಿದೆ.

ಕೋಲ್ಕತ್ತಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುವೆಂದು ಅಧಿಕಾರಿ ಹೆಸರು ಏಕಮತದಿಂದ ಘೋಷಿಸಲಾಯಿತು. ಪಕ್ಷದ ಹಿರಿಯ ನಾಯಕರು, ಹೊಸದಾಗಿ ಆಯ್ಕೆಯಾದ ಶಾಸಕರು ಹಾಗೂ ಕೇಂದ್ರ ನಾಯಕರ ಸಮ್ಮುಖದಲ್ಲಿ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಈ ಚುನಾವಣೆಯಲ್ಲಿ ಬಿಜೆಪಿ 294 ಕ್ಷೇತ್ರಗಳಲ್ಲಿ 293 ಕ್ಷೇತ್ರಗಳಲ್ಲಿ, ಅದರಲ್ಲಿ 207 ಸ್ಥಾನಗಳನ್ನು ಗೆದ್ದು ಭರ್ಜರಿ ಜಯ ದಾಖಲಿಸಿದೆ. ಸರ್ಕಾರ ರಚನೆಗೆ ಅಗತ್ಯವಿದ್ದ 148 ಸ್ಥಾನಗಳ ಗಡಿ ದಾಟಿ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ. ಇನ್ನೊಂದೆಡೆ, ಹಲವು ವರ್ಷಗಳಿಂದ ಆಡಳಿತ ನಡೆಸುತ್ತಿದ್ದ ಟಿಎಂಸಿ ಪಕ್ಷ ಕೇವಲ 80 ಸ್ಥಾನಗಳಿಗೆ ಸೀಮಿತವಾಗಿದೆ. ಕಾಂಗ್ರೆಸ್ ಕೇವಲ 2 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ.
ಇನ್ನೊಂದೆಡೆ, ಸರ್ಕಾರ ರಚನೆಗೆ ಉಪಮುಖ್ಯಮಂತ್ರಿಗಳ ಆಯ್ಕೆ ಕೂಡ ಭಾರೀ ಕುತೂಹಲ ಹುಟ್ಟಿಸಿದೆ. ಪಕ್ಷದ ಮೂಲಗಳ ಪ್ರಕಾರ, ರಾಜ್ಯದಲ್ಲಿ ಇಬ್ಬರು ಡಿಸಿಎಂಗಳನ್ನು ನೇಮಕ ಮಾಡುವ ಸಾಧ್ಯತೆಯಿದೆ. ಅವರಲ್ಲಿ ಮಹಿಳಾ ನಾಯಕಿಯಾಗಿರುವ ಸಾಧ್ಯತೆಯಿದೆ.
ದಕ್ಷಿಣ ಅಸಾನ್ಸೋಲ್ ಕ್ಷೇತ್ರದಲ್ಲಿ ಅಗ್ನಿ ಗೆಲುವು ಸಾಧಿಸಿರುವ ಬಿಜೆಪಿ ನಾಯಕಿಮಿತ್ರಾ ಪೌಲ್ ಅವರ ಹೆಸರು ಉಪಮುಖ್ಯಮಂತ್ರಿ ಸ್ಥಾನಕ್ಕೆ ಕೇಳಿಬರುತ್ತಿದೆ. ಜೊತೆಗೆ ಮಾಜಿ ಕೇಂದ್ರ ಸಚಿವ ನಿಸಿತ್ ಪ್ರಾಮಾಣಿಕ್ ಅವರನ್ನೂ ಎರಡನೇ ಡಿಸಿಎಂ ಸ್ಥಾನಕ್ಕೆ ಪರಿಗಣಿಸಲಾಗುತ್ತಿದೆ. ಬುಡಕಟ್ಟು ಸಮುದಾಯಕ್ಕೆ ಪ್ರತಿನಿಧಿತ್ವ ನೀಡುವ ಉದ್ದೇಶದಿಂದ ಮತ್ತೊಬ್ಬ ಪ್ರಮುಖ ನಾಯಕರಿಗೂ ಅವಕಾಶ ನೀಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

