ಮಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಟ ಸಾರ್ವಭೌಮ ಡಾ.ರಾಜ್ಕುಮಾರ್ ಅವರ ಹೆಸರಿನಲ್ಲಿ ನಿರ್ಮಾಣಗೊಂಡಿರುವ “ಡಾ. ರಾಜ್ ಸವಿನೆನಪು” ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು ಸಂಗೀತ ಸುಧೆ 2026” ಕಾರ್ಯಕ್ರಮವು ಡಾ.ರಾಜ್ ಅವರ 97ನೇ ಹುಟ್ಟು ಹಬ್ಬದ ಪ್ರಯುಕ್ತ ಮೇ 10 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಡಾ.ರಾಜ್ ಕುಮಾರ್ ಅಭಿಮಾನಿಗಳ ವೇದಿಕೆಯ ಅಧ್ಯಕ್ಷ ನಾಗೇಂದ್ರ ಎನ್ ತಿಳಿಸಿದ್ದಾರೆ.

ಪತ್ರಿಕಾಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕಾರ್ಯಕ್ರಮವು ಸಂಜೆ 5 ಗಂಟೆಗೆ ಪ್ರಾರಂಭವಾಗಲಿದೆ. “ಆಮಂತ್ರಣ ಪತ್ರಿಕೆ” ಮೂಲಕ ಸಾರ್ವಜನಿಕರಿಗೆ ಆಹ್ವಾನ ನೀಡಲಾಗಿದ್ದು, ಕನ್ನಡಾಭಿಮಾನಿಗಳಿಗಾಗಿ ವಿಶೇಷ ಸಂಗೀತ ರಸಮಂಜರಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಮುಖ್ಯ ಪ್ರಾಯೋಜಕವನ್ನು ಎಸ್.ಎಲ್.ಶೇಟ್ ಡೈಮಂಡ್ ಹೌಸ್ ಇವರು ವಹಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ.ಪಿ.ಎಲ್ ಧರ್ಮ, ಉಪ ಕುಲಪತಿಗಳು ಮಂಗಳೂರು ವಿ.ವಿ,ವಹಿಸಲಿದ್ದಾರೆ ಉದ್ಘಾಟನೆಯನ್ನು ದರ್ಶನ್ ಎಚ್.ವಿ ಜಿಲ್ಲಾಧಿಕಾರಿ ದ.ಕ ನೆರವೇರಿಸಲಿದ್ದಾರೆ, ಮುಖ್ಯ ಅತಿಥಿಗಳಾಗಿ ರವೀಂದ್ರ ಎಲ್.ಶೇಟ್, ಎಸ್.ಎ ಚಿನ್ನೇಗೌಡ ,ಚಲನಚಿತ್ರ ನಿರ್ಮಾಪಕರು, ವಿಶ್ವನಾಥ್ ಚಲನಚಿತ್ರ ನಿರ್ದೇಶಕರು, ಕೆ.ಆರ್ ಜನಾರ್ಧನ್ ಬಾಬು, ಶ್ರೀಮತಿ ಡಾ.ಸುಮತಿ ಶ್ರೀ, ರಂಗಭೂಮಿ ಕಲಾವಿದೆ.ಬೆಂಗಳೂರು ಮೊದಲಾದವರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಡಾ. ರಾಜ್ಕುಮಾರ್ ಅಭಿನಯದ ಅಮರ ಗೀತೆಗಳನ್ನು ರಾಜ್ಯದ ಪ್ರಖ್ಯಾತ ಗಾಯಕರು ಮತ್ತು ಕಲಾವಿದರು ಹಾಡಲಿದ್ದಾರೆ. ಈ ಕಾರ್ಯಕ್ರಮವು ಕನ್ನಡ ನಾಡು-ನುಡಿಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ವಿಶಿಷ್ಟ ವೇದಿಕೆಯಾಗಲಿದೆ. ಕಾರ್ಯಕ್ರಮಕ್ಕೆ ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ರವೀಂದ್ರ ಎಲ್.ಶೇಟ್, ಕದ್ರಿ ಮನೋಹರ್ ಉಪಸ್ಥಿತರಿದ್ದರು

