ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಗೊಲ್ಡನ್ ಸ್ಟಾರ್ ಗಣೇಶ್ – ಶಿಲ್ಪಾ ಗಣೇಶ್ ನಿರ್ಮಾಣದ ಕನ್ನಡ ಹಾಗೂ ತುಳುವಿನಲ್ಲಿ ನಿರ್ಮಿಸಿರುವ ಚಿತ್ರ “ಪಿಚ್ಚರ್”.
ಸಂದೀಪ ಬೆದ್ರ ನಿರ್ದೇಶನದ ಈ ಚಿತ್ರದ ನಾಯಕರಾಗಿ ನಿತ್ಯಪ್ರಕಾಶ್ ಬಂಟ್ವಾಳ್ ಹಾಗೂ ನಾಯಕಿಯಾಗಿ ಅಮ್ರತಾ ನಾಯ್ಕ್ ನಟಿಸಿದ್ದಾರೆ. ಈ ಚಿತ್ರದ ವಿಶೇಷವೆಂದರೆ ನಿರ್ಮಾಪಕಿ ಶಿಲ್ಪಾ ಗಣೇಶ್ “ಗೋಕುಲದ ರಾಧೆ” ಎಂಬ ಹಾಡನ್ನು ಕನ್ನಡ ಹಾಗೂ ತುಳು ಎರಡು ಭಾಷೆಗಳಲ್ಲೂ ಹಾಡಿದ್ದಾರೆ. ಈ ಮೂಲಕ ನಿರ್ಮಾಪಕಿಯಾಗಿದ್ದ ಶಿಲ್ಪಾ ಗಣೇಶ್ ಅವರು ಈಗ ಗಾಯಕಿಯಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ.

ಶಿಲ್ಪಾ ಗಣೇಶ್ ಹಾಗೂ ಜಸ್ಕರಣ್ ಸಿಂಗ್ ಈ ಹಾಡನ್ನು ಹಾಡಿದ್ದಾರೆ. ಕೀರ್ತನ್ ಭಂಡಾರಿ ರಚನೆಯ ಈ ಹಾಡಿಗೆ ಸ್ಯಾಮ್ಯುಯೆಲ್ ಅಭಿ ಸಂಗೀತ ನೀಡಿದ್ದಾರೆ. ಹಾಡಿನ ಚಿತ್ರೀಕರಣವನ್ನು ಕಾಶ್ಮೀರದಲ್ಲಿ ಚಿತ್ರೀಕರಿಸಲಾಗಿದೆ. ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಈ ಹಾಡು ಬಿಡುಗಡೆಯಾಗಿದ್ದು.ಹಾಡಿಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ,
ಪಿಚ್ಚರ್ ಚಿತ್ರದಲ್ಲಿ ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರ್, ಸಾಯಿಕೃಷ್ಣ ಕುಡ್ಲ, ಸದಾಶಿವ ಅಮಿನ್, ಪ್ರಸನ್ನ ಶೆಟ್ಟಿ ಬೈಲೂರ್, ಸಂದೀಪ್ ಶೆಟ್ಟಿ ಮಾಣಿ, ಉಮೇಶ್ ಮಿಜಾರ್, ಜಯಶೀಲಾ, ರೂಪ ವರ್ಕಾಡಿ, ರವಿ ರಾಮಕುಂಜ, ಪುಷ್ಪರಾಜ್ ಬೊಳ್ಳಾರ್, ಅನಿಲ್ ಉಪ್ಪಳ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
ನಿರ್ದೇಶಕ ಸಂದೀಪ್ ಬೆದ್ರ ಅವರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಸಂತೋಷ್ ರೈ ಪಾತಾಜೆ ಹಾಗೂ ಚಂದ್ರಶೇಖರ್ ಕೆ.ಎಸ್ ಅವರ ಛಾಯಾಗ್ರಹಣ, ರಾಜು ಆರ್ಯನ್ ಸಂಕಲನ, ಧನಂಜಯ್.ಬಿ – ಶ್ರೀರಾಜು ನೃತ್ಯ ನಿರ್ದೇಶನ, ರಾಧೇಶ್ – ಸಂತೋಷ್ ಪೂಜಾರಿ ಕಲಾ ನಿರ್ದೇಶನ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ಮೋಹನ್ ಭಟ್ಕಳ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ, ಜುಲೈ 24 ರಂದು ರಾಜ್ಯಾದ್ಯಂತ ಚಿತ್ರ ತೆರೆಗೆ ಬರಲಿದೆ.

