ಮುಲ್ಕಿ : ಹೈಡ್ರೊವಿಡ್ ಗಾಂಜಾ ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜು ವಿಧ್ಯಾರ್ಥಿನಿಯನ್ನು ಬಂಧಿಸುವಲ್ಲಿ ಮುಲ್ಕಿ ಪೋಲಿಸರು ಯಶಸ್ವಿಯಾಗಿದ್ದಾರೆ.
ಮುಲ್ಕಿ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಹೈಡ್ರೊವಿಡ್ ಗಾಂಜಾ ಮಾದಕ ದ್ರವ್ಯವನ್ನು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸುಹಾನ ಎಂಬಾಕೆಯನ್ನು ವಶಕ್ಕೆ ಪಡೆದು ಅವಳ ಬಳಿ ಇದ್ದ ಸುಮಾರು 35 ಲಕ್ಷ ಮೌಲ್ಯದ ಸುಮಾರು 1 ಕೆಜಿ 42 ಗ್ರಾಂ ಹೈಡ್ರೊವಿಡ್ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಮೊಬೈಲ್ ಮತ್ತು ಇತರ ಸೊತ್ತು ವಶಪಡಿಸಿಕೊಳ್ಳಲಾಗಿದೆ. ಈಕೆ ಕುಂದಾಪುರ ಕಾಲೇಜಿನ ಅಂತಿಮ ವರ್ಷದ BCA ವಿದ್ಯಾರ್ಥಿನಿಯಾಗಿದ್ದಾಳೆ
ಈಕೆ ಮಾದಕ ವಸ್ತುವನ್ನು ಚೆನ್ನೈನಿಂದ ತರಿಸಿಕೊಂಡು ಮಂಗಳೂರಿನಲ್ಲಿ ಅಕ್ರಮವಾಗಿ ಪೂರೈಕೆ ಮಾಡಿ ಹಣಗಳಿಸುವ ಉದ್ದೇಶದಿಂದ ತಂದಿರುವುದಾಗಿ ತನಿಖೆಯಲ್ಲಿ ತಿಳಿದು ಬಂದಿದೆ. ಆರೋಪಿ ವಿರುದ್ದ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 32/2026 ಕಲಂ: 8(ಸಿ), 20(ಬಿ) ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಪಣಂಬೂರು ಎಸಿಪಿ ತಂಡ ಹಾಗೂ ಮೂಲ್ಕಿ ಠಾಣೆಯ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ. ಆರೋಪಿತೆಯ ವಿರುದ್ಧ ಕಾವೂರು ಪೊಲೀಸ್ ಠಾಣಾ ಅ. ಕ್ರ 37/2026 ಕಲಂ: 8(C), 22(C) NDPS Act ಹಾಗೂ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ಕಸ್ಟಮ್ O. R No: 177/2025-26 U/S 20(b), 2(B), 23(b), 27(A) & 29 NDPS Act ನಡಿಯಲ್ಲಿ ಪ್ರಕರಣ ದಾಖಲಾಗಿದೆ.

