ಕಾಸರಗೋಡು : ಅನಂತಪುರ ಕೈಗಾರಿಕಾ ಪ್ರದೇಶದಲ್ಲಿ ಉಂಟಾಗಿರುವ ಪರಿಸರ ಮಾಲಿನ್ಯ ಹಾಗೂ ದುರ್ವಾಸನೆ ತುರ್ತು ಪರಿಹಾರ ಕಂಡುಹಿಡಿಯಲು ಹಾಗೂ ಜನರ ಸಂಕಷ್ಟಗಳಿಗೆ ಸ್ಪಂದಿಸಲು ಸಂಬಂಧಪಟ್ಟ ಅಧಿಕಾರಿಗಳು ಸಿದ್ಧರಾಗಬೇಕೆಂದು ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷೆ
ಎಂ. ಎಲ್. ಅಶ್ವಿನಿ ಆಗ್ರಹಿಸಿದರು.

ಬಿಜೆಪಿ ಮುಖಂಡರು ಹಾಗೂ ಸ್ಥಳೀಯ ನಿವಾಸಿಗಳೊಂದಿಗೆ ಕೈಗಾರಿಕಾ ಪ್ರದೇಶದ ವಿವಿಧ ಘಟಕಗಳಿಗೆ ಭೇಟಿ ನೀಡಿದ ಬಳಿಕ ಅವರು ಈ ಬಗ್ಗೆ ಮಾತನಾಡಿ , “ಕೈಗಾರಿಕೀಕರಣ ಜನರ ಆರ್ಥಿಕ ಪ್ರಗತಿಗೆ ಅಗತ್ಯ.. ಆದರೆ ಜನರ ಆರೋಗ್ಯವನ್ನು ಹಾಳುಮಾಡುವ, ಜಲಮೂಲಗಳನ್ನು ಮತ್ತು ವಾತಾವರಣವನ್ನು ಕಲುಷಿತಗೊಳಿಸುವ ಕೈಗಾರಿಕೆಗಳನ್ನು ಕೈಬಿಡಲು ಕೈಗಾರಿಕಾ ಇಲಾಖೆಯು ಸಿದ್ಧವಾಗಬೇಕು. ಸಂಬಂಧಿತ ಅಧಿಕಾರಿಗಳು ಜನರ ಸಂಕಷ್ಟಕ್ಕೆ ಶೀಘ್ರ ಪರಿಹಾರ ಒದಗಿಸಬೇಕು” ಎಂದು ಅವರು ಒತ್ತಾಯಿಸಿದರು.



ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್. ಸುನಿಲ್, ಮಂಡಲದ ಅಧ್ಯಕ್ಷ ಸುನಿಲ್ ಅನಂತಪುರ, ಮಂಡಲದ ಉಪಾಧ್ಯಕ್ಷ ವಿಕ್ರಂ ಪೈ, ಮಂಡಲ ಕಾರ್ಯದರ್ಶಿ ಪ್ರದೀಪ್ ಕುಮಾರ್, ವಿನೋದ್ ಕೊಯಿಪ್ಪಾಡಿ, ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ, ಅಜಯ್ ನಾಯ್ಕಾಪ್ ಹಾಗೂ ಪಂಚಾಯತ್ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

