ಮಂಗಳೂರು : ಕರ್ನಾಟಕ ಪ್ರದೇಶ ಜಾತ್ಯತೀತ ಜನತಾದಳ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷರಾಗಿ ಹಿರಿಯ ಜೆಡಿಎಸ್ ಮುಖಂಡ ವಸಂತ ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಅಪ್ತರೂ ಆಗಿರುವ ವಸಂತ ಪೂಜಾರಿ ಅವರಿಗೆ ಜೆ.ಪಿ ನಗರದಲ್ಲಿರುವ ಪಕ್ಷದ ಕಚೇರಿಯಲ್ಲಿ ಅಧಿಕೃತ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು.