ಬೆಂಗಳೂರು : ಬಿಟ್ ಕಾಯಿನ್ ಬಹುಕೋಟಿ ಹಗರಣ ಪ್ರಕರಣದಲ್ಲಿ ಶಾಸಕ ಎನ್.ಎ.ಹ್ಯಾರಿಸ್ ಅವರ ಪುತ್ರ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ ಗೆ ಮತ್ತೆ ಶಾಕ್ ಎದುರಾಗಿದೆ. ಸೋಮವಾರ (ಜೂ.1) ಮತ್ತೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿದೆ.
ಇಡಿ ಜಾರಿ ಮಾಡಿರುವ ಸಮನ್ ನಿರ್ದೇಶನದಂತೆ, ನಲಪಾಡ್ ಸೋಮವಾರದಂದು ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಬೇಕಿದೆ. ಈ ಪ್ರಕರಣವು ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದು, ಹಣ ವರ್ಗಾವಣೆ ಮತ್ತು ಬಿಟ್ಕಾಯಿನ್ ದುರ್ಬಳಕೆ ಆರೋಪದ ಮೇಲೆ ತನಿಖಾ ಸಂಸ್ಥೆಗಳು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿವೆ.

ಮೂವರನ್ನ ಬಂಧಿಸಿರುವ ಅಧಿಕಾರಿಗಳು ಶ್ರೀಕಿ, ಮೊಹಮ್ಮದ್ ನಲಪಾಡ್ ಮನೆ ಮೇಲೆ ದಾಳಿ ನಡೆಸಿದ್ದ ಇಡಿ ಪರಿಶೀಲನೆ ನಡೆಸಿತ್ತು. ಈ ಪ್ರಕರಣ ಸಂಬಂಧ ಈಗಾಗಲೇ ಇಡಿ ಅಧಿಕಾರಿಗಳು ಶ್ರೀಕಿ, ಸುನೇಶ್ ಹೆಗ್ಡೆ, ರಾಬಿನ್ ಖಂಡೇವಾಲ ಅವರನ್ನು ಬಂಧಿಸಿದ್ದಾರೆ. ಎರಡನೇ ಬಾರಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.
ಬಿಟ್ ಕಾಯಿನ್ ಕೇಸ್ ಸಂಬಂಧ ಮೊಹಮ್ಮದ್ ನಲಪಾಡ್ ಅವರಿಗೆ ಇಡಿ ಎರಡನೇ ಬಾರಿ ನೋಟಿಸ್ ನೀಡಿದೆ. ರಾಜಕೀಯ ಕಾರ್ಯಕ್ರಮ ಹಿನ್ನೆಲೆ ಮೊದಲ ನೋಟಿಸ್ಗೆ ನಲಪಾಡ್ ಹಾಜರಾಗಿರಲಿಲ್ಲ. ಕಾರಣ ತಿಳಿಸಿ ಇಡಿಗೆ ಮನವಿ ಮಾಡಿದ್ದರು. .
ಇತ್ತೀಚೆಗಷ್ಟೇ ಬಿಟ್ ಕಾಯಿನ್ ಹಗರಣ ಪ್ರಕರಣದಲ್ಲಿ ಬೆಂಗಳೂರಿನ ಅಶೋಕನಗರದಲ್ಲಿರುವ ನಲಪಾಡ್ ಮನೆ ಮೇಲೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ ಸತತ 21 ಗಂಟೆಗಳ ಶೋಧ ಕಾರ್ಯ ನಡೆಸಿತ್ತು. ಈ ವೇಳೆ ಹಾರ್ಡ್ಡಿಸ್ಕ್ ವಿದೇಶಿ ವ್ಯವಹಾರದ ಬ್ಯಾಂಕ್ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿತ್ತು.

