ಬೆಳ್ತಂಗಡಿ : ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ ಅಸಹಜ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾದ ಪ್ರಕರಣವು ಒಂದು ಕೊಲೆ ಪ್ರಕರಣ ಎಂಬುದು ಪೊಲೀಸ್ ತನಿಖೆಯಲ್ಲಿ ಬಹಿರಂಗಗೊಂಡಿದ್ದು ಕೊಲೆ ಮಾಡಿದ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮ್ರತ ಯುವಕನನ್ನು ಬಂಟ್ವಾಳ ತಾಲೂಕಿನ ನಿವಾಸಿ ಯತೀಶ್ ಎಂದು ಗುರುತಿಸಲಾಗಿದೆ, ಕೊಲೆ ಪ್ರಕರಣದ ಆರೋಪಿಗಳಾದ ಯಶೋಧರ (35), ಕಡಬ ಚಾರ್ವಾಕ ನಿವಾಸಿ ಮೋಹನ್ (30) ಹಾಗೂ ಬೆಳ್ತಂಗಡಿ ಪಡಂಗಡಿ ನಿವಾಸಿ ಇಬ್ರಾಹಿಂ (54) ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಜೂನ್ 1 ರಂದು ಬೆಳಿಗ್ಗೆ, ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿ ಯತೀಶ್ ಎಂಬಾತನ ಮೃತದೇಹ ಬೆಳ್ತಂಗಡಿ ಗುರುವಾಯನಕೆರೆ, ಅಲಾದಿಕೊಟ್ಟಿಗೆ ಎಂಬಲ್ಲಿ ಪತ್ತೆಯಾಗಿತ್ತು. ಘಟನೆಯ ಬಗ್ಗೆ ತನಿಖೆ ಆರಂಭಿಸಿದ ಬೆಳ್ತಂಗಡಿ ಪೊಲೀಸರು
ಸ್ಥಳದಲ್ಲಿರುವ ಸಿಸಿಟಿವಿಗಳನ್ನು ಪರಿಶೀಲಿಸಿದಾಗ ಯತೀಶನಿಗೆ ಆರೋಪಿಗಳು ಹಲ್ಲೆ ಮಾಡುತ್ತಿರುವುದು ಕಂಡುಬಂದಿದ್ದು, ಆರೋಪಿಗಳ ಹಲ್ಲೆಯಿಂದಾಗಿ ಸದ್ರಿ ಯತೀಶನು ಮೃತಪಟ್ಟಿರುವುದಾಗಿ ಅನುಮಾನಿಸಲಾಗಿದ್ದು ಮ್ರತ ಯುವಕನ ಸಹೋದರ ನಿತೀನ್ ಅವರ ದೂರಿನ ಮೇರೆಗೆ ಪೊಲೀಸರು ಕೂಡಲೇ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.



