ಹೊಸನಗರ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ 85 ವರ್ಷದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ 85 ವರ್ಷದ ವೃದ್ಧರೊಬ್ಬರು ಗನ್ನಿಂದ ಗುಂಡು ಹಾರಿಸಿಕೊಂಡು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ತಟ್ಟೆಕೊಡ್ಲು ರಾಮಚಂದ್ರ ರಾವ್ (85) ಎಂದು ಗುರುತಿಸಲಾಗಿದೆ. ಮಂಗಳವಾರ ಮಧ್ಯರಾತ್ರಿ ಸುಮಾರು 1.30ರ ವೇಳೆಗೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಮಾಹಿತಿಯ ಪ್ರಕಾರ, ರಾಮಚಂದ್ರ ರಾವ್ ಅವರು ತಮ್ಮ ಬಳಿಯಿದ್ದ ಸಿಂಗಲ್ ಬ್ಯಾರಲ್ ಗನ್ ಬಳಸಿ ಕುತ್ತಿಗೆ ಸಮೀಪ ಗುಂಡು ಹಾರಿಸಿಕೊಂಡಿದ್ದು, ಪರಿಣಾಮ ತಲೆಯ ಭಾಗ ತೀವ್ರವಾಗಿ ಛಿದ್ರಗೊಂಡಿದೆ ಎಂದು ತಿಳಿದುಬಂದಿದೆ.
ಕುತೂಹಲಕಾರಿ ಸಂಗತಿಯೆಂದರೆ, ರಾಮಚಂದ್ರ ರಾವ್ ಅವರು ಮೂರು ದಿನಗಳ ಹಿಂದೆ ಬಿದ್ದು ತಲೆಗೆ ಗಾಯಗೊಂಡಿದ್ದರು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರೂ ನೋವು ಕಡಿಮೆಯಾಗಿರಲಿಲ್ಲ ಎನ್ನಲಾಗಿದೆ. ಇದೇ ಕಾರಣದಿಂದ ಅಸಹನೀಯ ನೋವಿನ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ, ಘಟನೆಯಲ್ಲಿ ಬಳಸಲಾದ ಗನ್ಗೆ ಮಾನ್ಯ ಪರವಾನಗಿ (ಲೈಸೆನ್ಸ್) ಇತ್ತೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ. ಗನ್ನಿಂದ ಗುಂಡು ಹಾರಿಸಿಕೊಂಡು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ತಟ್ಟೆಕೊಡ್ಲು ರಾಮಚಂದ್ರ ರಾವ್ (85) ಎಂದು ಗುರುತಿಸಲಾಗಿದೆ. ಮಂಗಳವಾರ ಮಧ್ಯರಾತ್ರಿ ಸುಮಾರು 1.30ರ ವೇಳೆಗೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಮಾಹಿತಿಯ ಪ್ರಕಾರ, ರಾಮಚಂದ್ರ ರಾವ್ ಅವರು ತಮ್ಮ ಬಳಿಯಿದ್ದ ಸಿಂಗಲ್ ಬ್ಯಾರಲ್ ಗನ್ ಬಳಸಿ ಕುತ್ತಿಗೆ ಸಮೀಪ ಗುಂಡು ಹಾರಿಸಿಕೊಂಡಿದ್ದು, ಪರಿಣಾಮ ತಲೆಯ ಭಾಗ ತೀವ್ರವಾಗಿ ಛಿದ್ರಗೊಂಡಿದೆ ಎಂದು ತಿಳಿದುಬಂದಿದೆ.
ಕುತೂಹಲಕಾರಿ ಸಂಗತಿಯೆಂದರೆ, ರಾಮಚಂದ್ರ ರಾವ್ ಅವರು ಮೂರು ದಿನಗಳ ಹಿಂದೆ ಬಿದ್ದು ತಲೆಗೆ ಗಾಯಗೊಂಡಿದ್ದರು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರೂ ನೋವು ಕಡಿಮೆಯಾಗಿರಲಿಲ್ಲ ಎನ್ನಲಾಗಿದೆ. ಇದೇ ಕಾರಣದಿಂದ ಅಸಹನೀಯ ನೋವಿನ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ, ಘಟನೆಯಲ್ಲಿ ಬಳಸಲಾದ ಗನ್ಗೆ ಮಾನ್ಯ ಪರವಾನಗಿ (ಲೈಸೆನ್ಸ್) ಇತ್ತೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ.