ಕೊಲ್ಕತ್ತಾ, : ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಅತ್ಯಂತ ಅನಿರೀಕ್ಷಿತ ಬೆಳವಣಿಗೆಯೊಂದು ನಡೆದಿದೆ. ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಈ ಹಿಂದೆ ಉಚ್ಚಾಟನೆಗೊಂಡಿದ್ದ ಹಿರಿಯ ನಾಯಕ ರಿತಬ್ರತಾ ಬ್ಯಾನರ್ಜಿ ಈಗ ಪಶ್ಚಿಮ ಬಂಗಾಳ ವಿಧಾನಸಭೆಯ ಹೊಸ ಪ್ರತಿಪಕ್ಷ ನಾಯಕನಾಗಿ ಆಯ್ಕೆಯಾಗಿದ್ದಾರೆ. ಟಿಎಂಸಿ ಪಕ್ಷದಲ್ಲಿ ಬಂಡಾಯ ಎದ್ದಿದ್ದು, ಪಕ್ಷವು ಅಧಿಕೃತವಾಗಿ ಇಬ್ಬಾಗವಾಗಿದೆ. ಇದು ಪಕ್ಷದ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಭಾರಿ ಆಘಾತವನ್ನು ನೀಡಿದೆ. ಟಿಎಂಸಿಯಿಂದ ಉಚ್ಚಾಟನೆಗೊಂಡಿದ್ದ ನಾಯಕ ರಿತಬ್ರತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳ ವಿಧಾನಸಭೆಯ ಹೊಸ ಪ್ರತಿಪಕ್ಷ ನಾಯಕನಾಗಿ ಅಧಿಕೃತವಾಗಿ ನೇಮಕಗೊಂಡಿದ್ದಾರೆ.

ಬರೋಬ್ಬರಿ 58 ಶಾಸಕರ ಬೆಂಬಲದೊಂದಿಗೆ ಅವರು ಈ ಜವಾಬ್ದಾರಿಯುತ ಹುದ್ದೆಯನ್ನು ಅಲಂಕರಿಸಿದ್ದಾರೆ. ಪಕ್ಷದಿಂದ ಉಚ್ಚಾಟನೆಗೊಂಡ ನಾಯಕರೊಬ್ಬರು ಇಷ್ಟು ದೊಡ್ಡ ಮಟ್ಟದ ಶಾಸಕರ ಬೆಂಬಲದೊಂದಿಗೆ ಪ್ರತಿಪಕ್ಷ ನಾಯಕರಾಗಿ ಹೊರಹೊಮ್ಮಿರುವುದು ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ರಿತಬ್ರತಾ ಬ್ಯಾನರ್ಜಿ ಅವರು ಅತ್ಯಂತ ಮಹತ್ವದ ಹೇಳಿಕೆ ನೀಡಿದ್ದಾರೆ. ತಮಗೆ ಟಿಎಂಸಿ ಪಕ್ಷದ ಶಾಸಕರ ಬೆಂಬಲವಿರುವುದನ್ನು ಪರೋಕ್ಷವಾಗಿ ಸೂಚಿಸಿರುವ ಅವರು, ತಮ್ಮ ರಾಜಕೀಯ ನಿಷ್ಠೆಯನ್ನು ಸ್ಪಷ್ಟಪಡಿಸಿದ್ದಾರೆ. “ನಾನು ಪ್ರತಿಪಕ್ಷ ನಾಯಕನಾಗಿ ಆಯ್ಕೆಯಾಗಿರಬಹುದು. ಆದರೆ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೇ ನಮ್ಮ ಸರ್ವೋಚ್ಚ ನಾಯಕಿ. ಇದರಲ್ಲಿ ಯಾವುದೇ ಸಂದೇಹವಿಲ್ಲ” ಎಂದು ಹೇಳಿದ್ದಾರೆ.


