ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಶುಭಾ ಪೂಂಜಾ ಅವರ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದ್ದು, ಮದುವೆಯಾಗಿ ನಾಲ್ಕನೇ ವರ್ಷಕ್ಕೆ ದಾಂಪತ್ಯ ಜೀವನಕ್ಕೆ ಮುಕ್ತಾಯ ಹಾಡಲು ದಂಪತಿ ನಿರ್ಧರಿಸಿದ್ದಾರೆ.
ಉಡುಪಿ ಮೂಲದ ಉದ್ಯಮಿ ಸುಮಂತ್ ಬಿಲ್ಲವ ಮತ್ತು ನಟಿ ಶುಭಾ ಪೂಂಜಾ ಅವರು ಕೆಲವು ವರ್ಷಗಳ ಕಾಲ ಪ್ರೀತಿಸುತ್ತಿದ್ದರು. ನಂತರ 2022ರ ಜನವರಿ 5 ರಂದು ಇಬ್ಬರ ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಮಂಗಳೂರಿನ ಮಜಲುಬೆಟ್ಟು ಬೀಡುನಲ್ಲಿ ಸರಳವಾಗಿ ವಿವಾಹವಾಗಿದ್ದರು. .

ನಟಿ ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಅರ್ಜಿಯ ಪ್ರಕ್ರಿಯೆಯ ಭಾಗವಾಗಿ ಮುಂದಿನ ವಿಚಾರಣೆಯ ದಿನದಂದು ಶುಭಾ ಪೂಂಜಾ ಮತ್ತು ಸುಮಂತ್ ಬಿಲ್ಲವ ಫ್ಯಾಮಿಲಿ ಕೋರ್ಟ್ನಲ್ಲಿ ವಿಚಾರಣೆಗೆ ಖುದ್ದಾಗಿ ಹಾಜರಾಗುವ ಸಾಧ್ಯತೆಯಿದೆ.

