ವಾರಾಣಸಿ : ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ 54ನೇ ಜನ್ಮದಿನದ ಅಂಗವಾಗಿ ಶುಕ್ರವಾರ ವಾರಾಣಸಿಯಲ್ಲಿ ಅವರ ಬೆಂಬಲಿಗರು ಮತ್ತು ಅಭಿಮಾನಿಗಳು ವಿಭಿನ್ನವಾಗಿ ಸಂಭ್ರಮಿಸಿದ್ದಾರೆ. ಮುಖ್ಯಮಂತ್ರಿಗಳ ವಯಸ್ಸನ್ನು ಸಂಕೇತಿಸುವಂತೆ ಭರ್ಜರಿ 54 ಕೆಜಿಯ ವಿಶೇಷ ಲಡ್ಡು ಕೇಕ್ ಅನ್ನು ಸಿದ್ಧಪಡಿಸಿ ಕತ್ತರಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಲಾಯಿತು.


ಇದೇ ಸಂದರ್ಭದಲ್ಲಿ ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಂಘಟಕರು ಹಾಗೂ ಬೆಂಬಲಿಗರು ಜಂಟಿಯಾಗಿ 54 ಸಸ್ಯಗಳನ್ನು ನೆಟ್ಟು ಪರಿಸರ ಪ್ರೇಮ ಮೆರೆದಿದ್ದಾರೆ. ಯೋಗಿ ಆದಿತ್ಯನಾಥ್ ಅವರ ದೀರ್ಘಾಯುಷ್ಯ ಮತ್ತು ಯಶಸ್ಸಿಗಾಗಿ ಅಭಿಮಾನಿಗಳು ವಿಶೇಷ ಪ್ರಾರ್ಥನೆ ಸಲ್ಲಿಸಿ, ಸಿಹಿ ಹಂಚಿ ಸೌಹಾರ್ದತೆಯಿಂದ ದಿನವನ್ನು ಆಚರಿಸಿದರು.

