ಮಂಗಳೂರು: ನಗರದ ಕೊಟ್ಟಾರ ಚೌಕಿಯಲ್ಲಿ ಕಚೇರಿ ಹೊಂದಿದ್ದ ಉದ್ಯಮಿಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಪತ್ತೆಯಾದವರನ್ನು ಸುನೀಲ್ ಬಿ.ಎಸ್. (36) ಎಂದು ಗುರುತಿಸಲಾಗಿದೆ. ಅವರು ಬಿಜೈಯಲ್ಲಿರುವ ಬಾಡಿಗೆ ಕೊಠಡಿಯಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.
ಜೂನ್ 12ರಂದು ರಾತ್ರಿ ಸುಮಾರು 9 ಗಂಟೆಗೆ ಸುನೀಲ್ ತಮ್ಮ ಸಹೋದರಿಯ ಮೊಬೈಲ್ಗೆ ಸಂದೇಶ ಕಳುಹಿಸಿದ್ದರು. ಇದಾದ ಬಳಿಕ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಅಂದಿನಿಂದ ಅವರು ಕುಟುಂಬ ಸದಸ್ಯರ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸುನೀಲ್ ಅವರ ಪತ್ತೆಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದರೂ ಯಾವುದೇ ಸುಳಿವು ದೊರೆಯದ ಹಿನ್ನೆಲೆಯಲ್ಲಿ ಉರ್ವ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಪತ್ತೆಯಾದ ಉದ್ಯಮಿಯ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

