ಕಾಸರಗೋಡು: ಪ್ರತಿಷ್ಠಿತ “ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ” ಪುರಸ್ಕೃತರು, ಸಮಾಜಸೇವಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಹಾಗೂ ಸಾಹಿತ್ಯ ಪೋಷಕರಾಗಿರುವ ವಿಜಯನಗರ ಜಿಲ್ಲೆಯ ಆರೋಗ್ಯ ನಿರೀಕ್ಷಣಾಧಿಕಾರಿ ಡಾ. ಎಂ.ಧರ್ಮನಗೌಡ ಅವರನ್ನು “ನಾಡೋಜ ಡಾ.ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ – 2026″ಕ್ಕೆ ಆಯ್ಕೆ ಮಾಡಲಾಗಿದೆ.
ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದಲ್ಲಿ ನಡೆಯಲಿರುವ ರಜತ ಸಂಭ್ರಮ ಸಮಾರೋಪ ಸಮಾರಂಭ ಹಾಗೂ “ಕರ್ನಾಟಕ – ಗಡಿನಾಡು ಕನ್ನಡ ಸಮ್ಮೇಳನ”ದ ಸಂದರ್ಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಗುವುದು.
ಮಾಜಿ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಐಎಎಸ್ ಅಧಿಕಾರಿ ಡಾ.ಸಿ.ಸೋಮಶೇಖರ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಗಣ್ಯರನ್ನು ಸನ್ಮಾನಿಸಲಾಗುವುದು.
ಈ ಕುರಿತು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ.ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಅವರು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

