ಬೆಂಗಳೂರು :ಬಹುಭಾಷಾ ನಟ ಪ್ರಕಾಶ್ ರಾಜ್ ಹಲವು ರಾಜ್ಯಗಳಲ್ಲಿ ಮತದಾರರ ಗುರುತಿನ ಚೀಟಿಗಳನ್ನು ಆರೋಪದ ಅಡಿಯಲ್ಲಿ ಅವರ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂಬಂಧ ಬೆಂಗಳೂರು ನ್ಯಾಯಾಲಯವು ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.
ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಪ್ರಕಾಶ್ ರಾಜ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿಗೊಳಿಸಿದೆ. ದಿಲೀಪ್ ಕುಮಾರ್ ಎಂಬವರು ದಾಖಲಿಸಿದ ದೂರಿನ ಆಧಾರದ ಮೇಲೆ ಈ ಪ್ರಕರಣ ಮುಂದುವರಿದಿದ್ದು, ಒಂದೇ ಹೆಸರಿನಲ್ಲಿ ನಾಲ್ಕು ವಿಭಿನ್ನ ರಾಜ್ಯಗಳಲ್ಲಿ ಮತದಾರ ಗುರುತಿನ ಚೀಟಿಗಳನ್ನು ಪಡೆದಿದ್ದಾರೆ ಎಂಬ ಗಂಭೀರ ಆರೋಪ ನಟರ ಮೇಲೆ ಹೊರಿಸಲಾಗಿದೆ.
ದಿಲೀಪ್ ಕುಮಾರ್ ಎಂಬವರು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ನ್ಯಾಯಾಲಯವು ಈ ಹಿಂದೆ ಎರಡು ಬಾರಿ ಸಮನ್ಸ್ ಜಾರಿಗೊಳಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆದರೆ, ನಟ ಪ್ರಕಾಶ್ ರಾಜ್ ಅವರು ನ್ಯಾಯಾಲಯದ ಸೂಚನೆಗಳನ್ನು ಪಾಲಿಸದೆ ವಿಚಾರಣೆಗೆ ಹಾಜರಾಗಿಲ್ಲ ಎಂದು ದಾಖಲೆಗಳಲ್ಲಿ ಹೇಳಲಾಗಿದೆ.
ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ತಮಿಳುನಾಡಿನಲ್ಲಿ ಅಕ್ರಮವಾಗಿ ವೋಟರ್ ಐಡಿ ಪ್ರಕರಣ ಎಂಬುದಾಗಿ ದೂರು ನೀಡಿದ್ದಾರೆ. ಈ ಸಂಬಂಧ 48ನೇ ಎಸಿಜೆಎಂ ಕೋರ್ಟ್ ಮತ್ತು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಗಳು ಹಲವು ಬಾರಿ ಸಮನ್ಸ್ ಮತ್ತು ಬಂಧನ ವಾರಂಟ್ ಅವರು ಜಾರಿಯಲ್ಲಿದ್ದರೂ, ಪ್ರಕಾಶ್ ರಾಜ್ ನ್ಯಾಯಾಲಯಕ್ಕೆ ಹಾಜರಾಗಿಲ್ಲ ಎಂದು ವರದಿಯಾಗಿದೆ. ಎರಡು ಬಾರಿ ಸಮನ್ಸ್ ಜಾರಿ ಮಾಡಿಲ್ಲ, ನಂತರ ಎರಡು ಬಾರಿ NBW ನೀಡಿದರೂ ಸಹ ಅವರು ಕೋರ್ಟ್ ಮುಂದೆ ಹಾಜರಾಗಲು ಕಾರಣ, ಇದೀಗ ಮೂರನೇ ಬಾರಿ ಜಾಮೀನು ಬಂಧನ ವಾರಂಟ್ ಹೊರಡಿಸಲಾಗಿದೆ.

