ಮಂಗಳೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI)ಯ 18ನೇ ಸಂಸ್ಥಾಪನಾ ದಿನಾಚರಣೆಯನ್ನು ಮಂಗಳೂರು ನಗರ ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಭಾನುವಾರ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷ ಅಶ್ರಫ್ ಅಡ್ಡೂರು ವಹಿಸಿದ್ದು, ಅವರು ಪಕ್ಷದ ಧ್ವಜಾರೋಹಣ ನೆರವೇರಿಸಿ ಸಂಸ್ಥಾಪನಾ ದಿನದ ಸಂದೇಶ ನೀಡಿದರು. ತಮ್ಮ ಭಾಷಣದಲ್ಲಿ SDPIಯು ಸಾಮಾಜಿಕ ನ್ಯಾಯ, ಸಮಾನತೆ, ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಮೌಲ್ಯಗಳ ರಕ್ಷಣೆಗಾಗಿ ಕಳೆದ 17 ವರ್ಷಗಳಿಂದ ನಿರಂತರ ಹೋರಾಟ ನಡೆಸುತ್ತಿದ್ದು, ಶೋಷಿತ ಹಾಗೂ ಅಂಚಿನ ಸಮುದಾಯಗಳ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು. ಪರ್ಯಾಯ ರಾಜಕಾರಣದ ಸಕಾರಾತ್ಮಕ ಶಕ್ತಿಯಾಗಿ ಪಕ್ಷವು ದೇಶದಾದ್ಯಂತ ಜನರ ವಿಶ್ವಾಸ ಗಳಿಸಿಕೊಂಡಿದ್ದು, ಜನಪರ ಹೋರಾಟಗಳನ್ನು ಮತ್ತಷ್ಟು ಬಲಪಡಿಸುವ ಸಂಕಲ್ಪವನ್ನು ವ್ಯಕ್ತಪಡಿಸಿದರು.


ಕಾರ್ಯಕ್ರಮವನ್ನು ಅಕ್ಬರ್ ರಝಾ ನಿರೂಪಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ಜಿಲ್ಲಾ ಕಾರ್ಯದರ್ಶಿ ಶಫೀಕ್ ಮಲ್ಲೂರು, ಜಿಲ್ಲಾ ಉಪಾಧ್ಯಕ್ಷ ಅಝೀಝ್ ಸುರತ್ಕಲ್, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಾಧ್ಯಕ್ಷ ಉಸ್ಮಾನ್ ಗುರುಪುರ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಾಧ್ಯಕ್ಷ ವಸೀಮ್ ಕುದ್ರೋಳಿ ಹಾಗೂ ಜಿಲ್ಲಾ ಸಮಿತಿ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಸಂಸ್ಥಾಪನಾ ದಿನಾಚರಣೆಗೆ ಶುಭ ಹಾರೈಸಿದರು.

