ಕಣ್ಣೂರು: ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ಸು ಮಟ್ಟನೂರ್ ಶಿವಪುರಂನಲ್ಲಿ ಬೆಂಕಿ ಹೊತ್ತಿಕೊಂಡಿದೆ. ವಯನಾಡಿನಿಂದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಹೋಗುತ್ತಿದ್ದ ಬಸ್ಸಿನಲ್ಲಿ 42 ಮಂದಿ ಉಮ್ರಾ ಪ್ರಯಾಣಿಕರಿದ್ದರು. ಬೆಂಕಿ ಹೊತ್ತಿಕೊಂಡ ತಕ್ಷಣ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು, ಇದರಿಂದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.
ಬೆಂಕಿಯ ತೀವ್ರತೆಗೆ ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು. ಹತ್ತಿರದ ಅಂಗಡಿಗೆ ವ್ಯಾಪಿಸಿ ಬಹಳ ನಷ್ಟ ಉಂಟಾಗಿದೆ. ವಸತಿ ಪ್ರದೇಶದಲ್ಲಿ ಬಸ್ ಬೆಂಕಿಗೆ ಆಹುತಿಯಾಗಿದ್ದು ಬಹಳ ಆತಂಕ ಮೂಡಿಸಿದೆ, ಆದರೆ ತಕ್ಷಣ ಅಗ್ನಿಶಾಮಕ ದಳ ಬಂದು ಬೆಂಕಿಯನ್ನು ನಂದಿಸಿದ ನಂತರ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ..

