ಮಂಗಳೂರು, ಜೂ. 23: ಮಂಗಳೂರು IAS, ರಚನಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಹಾಗೂ ರಾಮಕೃಷ್ಣ ಮಿಷನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಾಗರಿಕ ಸೇವಾ ಪರೀಕ್ಷಾ ಆಕಾಂಕ್ಷಿಗಳಿಗಾಗಿ ‘ಮಾರ್ಗದರ್ಶಿ – Cracking the UPSC Examination’ ವಿಶೇಷ ಮಾರ್ಗದರ್ಶನ ಕಾರ್ಯಕ್ರಮವು ಜೂನ್ 28ರಂದು ಬೆಳಿಗ್ಗೆ 8.30ರಿಂದ ಮಧ್ಯಾಹ್ನ 12.30ರವರೆಗೆ ಮಂಗಳೂರಿನ ಮಂಗಳಾದೇವಿಯ ರಾಮಕೃಷ್ಣ ಮಿಷನ್ ಸಭಾಂಗಣದಲ್ಲಿ ನಡೆಯಲಿದೆ ಎಂದು ರಚನಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ ಅಧ್ಯಕ್ಷ ರೊಯ್ ಕ್ಯಾಸ್ಟೆಲಿನೊ ತಿಳಿಸಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಪಿಎಸ್ಸಿ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಗೆ ಸಮಗ್ರ ಮಾರ್ಗದರ್ಶನ ನೀಡುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅರುಣ್ ಜೇಜಿ ಚಕ್ರವರ್ತಿ, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಶಿಕಾಂತ್ ಸೋಮನಾಥ್ ವಿಭೂತೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಯುಪಿಎಸ್ಸಿ ಮಾಸ್ಟರ್ ಟ್ರೈನರ್ಗಳಾದ ಮೋಹನ್ ಕೃಷ್ಣಮೂರ್ತಿ ಮತ್ತು ಚಂದ್ರಮೋಹನ್ ಇನಗಂಟಿ ಸೇರಿದಂತೆ ತಜ್ಞರು ಪರೀಕ್ಷಾ ಮಾದರಿ, ಅಧ್ಯಯನ ತಂತ್ರಗಳು, ಸಮಯ ನಿರ್ವಹಣೆ ಹಾಗೂ ವೃತ್ತಿ ಅಭಿವೃದ್ಧಿ ಕುರಿತಂತೆ ಮಾರ್ಗದರ್ಶನ ನೀಡಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು IAS ಸಂಸ್ಥಾಪಕ ಸಂತೋಷ್ ರಾವ್, ಸಂದೇಶ ಫೌಂಡೇಶನ್ ಫಾರ್ ಕಲ್ಚರ್ ಆ್ಯಂಡ್ ಎಜುಕೇಶನ್ ನಿರ್ದೇಶಕ ಫಾ. ರೋಶನ್ ರೊಸಾರಿಯೊ OFM (CAP), ಹಾಗೂ ಕಾರ್ಯದರ್ಶಿ ಆ್ಯಲ್ರನ್ ರೊಡ್ರಿಗಸ್ , ಸದಸ್ಯರಾದ ಜೆನಿಫರ್ ಜಾಸ್ಮಿನ್ ಲೋಬೋ ಉಪಸ್ಥಿತರಿದ್ದರು.


