ಶಿವಮೊಗ್ಗ : ಸ್ಯಾಂಡಲ್ ವುಡ್ ನ ಹಿರಿಯ ನಿರ್ಮಾಪಕ, ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಬಾ.ಮಾ ಹರೀಶ್ ಅವರ ಪುತ್ರ ಉಲ್ಲಾಸ್ ಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ.ಅವರಿಗೆ 28 ವರ್ಷ ವಯಸ್ಸಾಗಿತ್ತು.
ಉಲ್ಲಾಸ್ ಗೌಡ ಅವರು ತಮ್ಮ ಸ್ನೇಹಿತರೊಂದಿಗೆ ಶಿವಮೊಗ್ಗ ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣವಾದ ಕೊಡಚಾದ್ರಿ ಬೆಟ್ಟಕ್ಕೆ ಚಾರಣಕ್ಕೆ ತೆರಳುತ್ತಿದ್ದಾಗ ಹಠಾತ್ತಾಗಿ ಎದೆ ನೋವು ಕಾಣಿಸಿಕೊಂಡಿತ್ತು, ಕೂಡಲೇ ಅವರ ಸ್ನೇಹಿತರು ಆಸ್ಪತ್ರೆಗೆ ಸಾಗಿಸುತ್ತಿರುವಾಗ ಹೃದಯಾಘಾತದಿಂದ ಸಾವನ್ನಪ್ಪಿದರು

ಉಲ್ಲಾಸ್ ಗೌಡ ಅವರಿಗೆ ಡಿಸೆಂಬರ್ ತಿಂಗಳಲ್ಲಿ ಮದುವೆ ನಿಶ್ಚಯವಾಗಿತ್ತು. ಕೆಲವೇ ದಿನಗಳ ಹಿಂದೆಯಷ್ಟೇ ಚಂದನಾ ಗೌಡ ಎಂಬ ಯುವತಿಯೊಂದಿಗೆ ಉಲ್ಲಾಸ್ ಅವರ ನಿಶ್ಚಿತಾರ್ಥ ಅದ್ದೂರಿಯಾಗಿ ನೆರವೇರಿತ್ತು. ಇನ್ನು ಕೆಲವೇ ದಿನಗಳಲ್ಲಿ ಮದುವೆ ನಡೆಯಲಿದ್ದು, ಅಷ್ಟರಲ್ಲಿ ಉಲ್ಲಾಸ್ ನಿಧನ ಹೊಂದಿದ್ದಾರೆ.

‘ಮೆಜೆಸ್ಟಿಕ್ʼನಂತಹ ಸೂಪರ್ ಹಿಟ್ ಸಿನಿಮಾಗಳನ್ನ ನೀಡಿರುವ ನಿರ್ಮಾಪಕ ಭಾ ಮಾ ಹರೀಶ್ ಕನ್ನಡ ಚಿತ್ರರಂಗದಲ್ಲಿ ಅಪಾರ ಗೌರವ ಗಳಿಸಿದ್ದಾರೆ. ಮಗನ ಅಕಾಲಿಕ ನಿಧನದ ಸುದ್ದಿ ಕೇಳಿ ಇಡೀ ಸ್ಯಾಂಡಲ್ವುಡ್ ಕಂಬನಿ ಮಿಡಿದಿದೆ.




