ಟೆಹರಾನ್ : ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಗೆ ಯಾವುದೇ ಯುರೋಪಿಯನ್ ದೇಶಕ್ಕೆ ಅಧಿಕೃತ ಆಹ್ವಾನಗಳನ್ನು ಕಳುಹಿಸದಿರಲು ಇರಾನ್ ನಿರ್ಧರಿಸಿದೆ ಎಂದು ಇರಾನ್ ವಿದೇಶಾಂಗ ಸಚಿವಾಲಯ ತಿಳಿಸಿದೆ. ಇರಾನ್ ವಿರುದ್ಧದ ನೀತಿಗಳನ್ನು ಬೆಂಬಲಿಸಿದ ಮತ್ತು ಬಿಕ್ಕಟ್ಟಿನ ಸಂದರ್ಭದಲ್ಲಿ ಅದನ್ನು ಬೆಂಬಲಿಸದ ದೇಶಗಳನ್ನು ಅಂತ್ಯಕ್ರಿಯೆಗೆ ಆಹ್ವಾನಿಸಲಾಗುವುದಿಲ್ಲ ಎಂದು ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಖಮೇನಿ ಅವರ ಅಂತ್ಯಕ್ರಿಯೆ ವಿಧಿಗಳು ಜುಲೈ 4 ರಂದು ಪ್ರಾರಂಭವಾಗಲಿವೆ. ನಂತರ ಜುಲೈ 9 ರಂದು ಮಶಾದ್ನಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಅವರ ಮರಣದ ಸುಮಾರು 133 ದಿನಗಳ ನಂತರ ಅಂತ್ಯಕ್ರಿಯೆಯ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ. ವರದಿಗಳ ಪ್ರಕಾರ ಭಾರತದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಪಬಿತ್ರ ಮಾರ್ಗರಿಟಾ ಮತ್ತು ಬಿಹಾರ ಗವರ್ನರ್ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸೈಯದ್ ಅತಾ ಹಸ್ನೈನ್ ಅವರು ಅಂತ್ಯಕ್ರಿಯೆ ಸಮಾರಂಭದಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

