ಮಂಗಳೂರು : ದ.ಕ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ (ಜು.2) ರಂದು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ (IMD) ದ.ಕ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ರಜೆ ನೀಡಲಾಗಿದೆ.
ಯಾವೆಲ್ಲ ಸಂಸ್ಥೆಗಳಿಗೆ ರಜೆ?
ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳು, ಪದವಿ ಪೂರ್ವ ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಜುಲೈ 7ರ ವರೆಗೆ ಭಾರಿ ಮಳೆಯ ಮುನ್ಸೂಚನೆ ಇದೆ. ನಾಳೆ ಕರಾವಳಿ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಹಾಗೂ ಜುಲೈ 5ರಂದು ದಕ್ಷಿಣ ಒಳನಾಡಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಸೇರಿ ಕೊಡಗಿನಲ್ಲಿ ಗಾಳಿ ಸಹಿತ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

