ಕಾರವಾರ : ಆರೋಗ್ಯ ಸಚಿವ ಯು.ಟಿ.ಖಾದರ್ ಅವರ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ವರದರಾಜ್ ಹೋಟೆಲ್ ಸಮೀಪ ಈ ಅಪಘಾತ ಸಂಭವಿಸಿದೆ. .
ಕಾರವಾರದಿಂದ ಉಡುಪಿ ಕಡೆಗೆ ಆರೋಗ್ಯ ಸಚಿವ ಯು.ಟಿ.ಖಾದರ್ ಅವರನ್ನು ಅವರ ಬೆಂಗಾವಲು ವಾಹನಗಳೊಂದಿಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ರಸ್ತೆಯಲ್ಲಿ ಸಾಗುತ್ತಿದ್ದ ಸ್ಕೂಟಿ ವಾಹನಕ್ಕೆ ಅವರ ಬೆಂಗಾವಲು ವಾಹನವೊಂದು ಡಿಕ್ಕಿ ಹೊಡೆದಿದೆ. ಅಪಘಾತದ ಪ್ರಮಾಣಕ್ಕೆ ಸ್ಕೂಟಿ ಸವಾರ ರಸ್ತೆಗೆ ಬಿದ್ದು ತಲೆಗೆ ತೀವ್ರ ಪೆಟ್ಟು ಬಿದ್ದಿದೆ. ಘಟನೆಯಲ್ಲಿ ಅಲಗೇರಿ ಮೂಲದ ಸಂದೀಪ್ ನಾಯಕ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಲೆಗೆ ಪೆಟ್ಟು ಬಿದ್ದಿರುವ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಚಿಕಿತ್ಸೆಗೆ ಕರೆದೊಯ್ಯಲಾಯಿತು.
ಅಪಘಾತವಾಗುತ್ತಿದ್ದಂತೆಯೇ ವಾಹನದಲ್ಲಿದ್ದ ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ತಕ್ಷಣ ಸ್ಪಂದಿಸಿದರು. ತಾವೇ ಸ್ವತಃ ಸ್ಕೂಟಿ ಸವಾರನಿಗೆ ಪ್ರಥಮ ಚಿಕಿತ್ಸೆಯ ವ್ಯವಸ್ಥೆ ಮಾಡಿದರು. ಗಾಯಾಳುವನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲು ಸೂಚಿಸಿದ ಅವರು, ಸೂಕ್ತ ಚಿಕಿತ್ಸೆಗೆ ಎಲ್ಲಾ ವ್ಯವಸ್ಥೆಗಳನ್ನು ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗಾಯಾಳು ಸಂದೀಪ್ ನಾಯಕ್ ಅವರಿಗೆ ಅಂಕೋಲಾ ಪಟ್ಟಣದ ಆರ್ಯ ಮೆಡಿಕಲ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಲೆಗೆ ಪೆಟ್ಟಿನ ಹೊರತಾಗಿಯೂ, ಅವರ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಅವರಿಗೆ ಅಗತ್ಯ ಚಿಕಿತ್ಸೆಗಳನ್ನು ನೀಡಲಾಗುತ್ತಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

