ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೋಂತಿಮಾರು ಎಂಬಲ್ಲಿ ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಯುವಕನೋರ್ವ ಚೂರಿಯಿಂದ ಇರಿದ ಘಟನೆ ಇಂದು ಬೆಳಗ್ಗೆ ನಡೆದಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೋಂತಿಮಾರು ಪಡ್ಡು ಎಂಬಲ್ಲಿ ಕಾಲೇಜ್ ಗೆ ತೆರಳಲು ಬಸ್ ನಿಲ್ದಾಣದಲ್ಲಿ ಬಾಲಕಿ ಬಸ್ ಗೆ ಕಾಯುತ್ತಿದ್ದ ಸಂದರ್ಭ ಅಲ್ಲಿಗೆ ಆಗಮಿಸಿದ ಆರೋಪಿ ಮೋಂತಿಮಾರು ಪಡ್ಡು ನಿವಾಸಿ ಮೊಹಮ್ಮದ್ ಜವ್ವಾರ್ (28) ಏಕಾಏಕಿ ಮೆಚ್ಚಿನಿಂದ ತಲೆ ಹಾಗೂ ಕೈಗಳಿಗೆ ದಾಳಿ ನಡೆಸಿದ್ದಾನೆ. ಗಂಭೀರ ಗಾಯಗೊಂಡಿರುವ ಬಾಲಕಿಯನ್ನು ತಕ್ಷಣವೇ ಸ್ಥಳೀಯರು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ
ಕೃತ್ಯ ನಡೆಸಿದ ಬಳಿಕ ಆರೋಪಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.


