ಮಂಗಳೂರು : ನಗರದ ಮಣ್ಣಗುಡ್ಡ ಮಹಾತ್ಮ ಗಾಂಧಿ ಪಾರ್ಕ್ನಲ್ಲಿ ಕೆನರಾ ಶಾಲೆ ಡೊಂಗರಕೇರಿಯ ವತಿಯಿಂದ ಜುಲೈ 9, 2026 ವನಮಹೋತ್ಸವವನ್ನು ಸಂಭ್ರಮದಿಂದ ಹಾಗೂ ಹೆಮ್ಮೆಯಿಂದ ಆಚರಿಸಲಾಯಿತು. ಪರಿಸರ ಸಂರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಮಂಗಳೂರು ಉತ್ತರ ವಲಯ ಕ್ಷೇತ್ರ ಸಂಪನ್ಮೂಲ ಕೇಂದ್ರ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಬಿಆರ್ಪಿ ಶ್ರೀಮತಿ ವೀಣಾ, ಮಂಗಳೂರು ಉತ್ತರ ವಲಯ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀ ಪ್ರಸಾದ್ ನಲ್ಲೂರು,ಕಾರ್ಪೊರೇಟರ್ ಶ್ರೀಮತಿ ಸಂಧ್ಯಾ ಆಚಾರ್ಯ, ಸಹಾಯಕ ಕಾರ್ಯಪಾಲಕ ಅಭಿಯಂತರರು (ಪ್ರಭಾರ )ಮಿಥುನ್ ,ಕೆನರಾ ಆಡಳಿತ ಮಂಡಳಿಯ ಗೌರವ ಉಪಾಧ್ಯಕ್ಷರು ಹಾಗೂ ಕೆನರಾ ಶಾಲೆಯ ಸಂಚಾಲಕರಾದ ಶ್ರೀ ಕೆ. ಸುರೇಶ್ ಕಾಮತ್, ಸಸಿಗಳನ್ನು ನೆಡುವ ಮೂಲಕ ಉದ್ಘಾಟಿಸಿದರು.
ಸಭೆಯನ್ನುವುದ್ದೇಶಿಸಿ ಮಾತನಾಡಿದ ಗಣ್ಯರು, ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ವಿದ್ಯಾರ್ಥಿಗಳು ಕೇವಲ ಸಸಿಗಳನ್ನು ನೆಡುವುದಷ್ಟೇ ಅಲ್ಲದೆ ಅವುಗಳನ್ನು ಪೋಷಿಸಿ ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕೆನರಾ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಕವಿತಾ ಮೌರ್ಯ , ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಕೆನರಾ ಪ್ರೌಢಶಾಲೆಯ ಪರಿಸರ ಸಂಘದ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಲ್ಲಿ ಪರಿಸರದ ಮಹತ್ವ ಹಾಗೂ ಅದನ್ನು ಹೇಗೆ ಸಂರಕ್ಷಿಸಬೇಕು ಎಂಬ ಕುರಿತು ಜಾಗೃತಿ ಮೂಡಿಸಿದರು. ಜೊತೆಗೆ ಎಲ್ಲರೂ ಪರಿಸರವನ್ನು ಸಂರಕ್ಷಿಸಿ, ಅದರ ಕಾಳಜಿ ವಹಿಸುವುದಾಗಿ ಪ್ರತಿಜ್ಞೆಯನ್ನು ಸ್ವೀಕರಿಸಿದರು.
ವನಮಹೋತ್ಸವವು ಯುವ ಮನಸ್ಸುಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ಹಾಗೂ ಜವಾಬ್ದಾರಿಯುತ ಮನೋಭಾವ ಬೆಳೆಸುವ ಯಶಸ್ವಿ ಕಾರ್ಯಕ್ರಮವಾಗಿ ಮೂಡಿ ಬಂದಿತು.

