ಮಂಗಳೂರು: ಬಂಟ್ವಾಳದ ಬಿ.ಸಿ.ರೋಡ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬರ್ಬರವಾಗಿ ಹತ್ಯೆಗೀಡಾದ ಲಾವಣ್ಯ ಅವರ ಮರಣೋತ್ತರ ಪರೀಕ್ಷೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಪೂರ್ಣಗೊಂಡಿದೆ.

ಮರಣೋತ್ತರ ಪರೀಕ್ಷೆಯ ಬಳಿಕ ಲಾವಣ್ಯ ಅವರ ಮೃತದೇಹವನ್ನು ಬಂಟ್ವಾಳ ತಾಲೂಕಿನ ಕಕ್ಯಪದವು ಗ್ರಾಮದ ಕೊಡಂಗೆಯಲ್ಲಿರುವ ಅವರ ನಿವಾಸಕ್ಕೆ ರವಾನೆ ಮಾಡಲಾಗಿದೆ. ಕುಟುಂಬಸ್ಥರು, ಬಂಧು-ಬಳಗ ಹಾಗೂ ಗ್ರಾಮಸ್ಥರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಲಾವಣ್ಯ ಅವರು ಶುಕ್ರವಾರ ಸಂಜೆ ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ದುಷ್ಕರ್ಮಿಯ ಚೂರಿ ದಾಳಿಗೆ ಬಲಿಯಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ತನಿಖೆ ಮುಂದುವರಿದಿದೆ.


