ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್ ಬಳಿ ಸಮುದ್ರದಲ್ಲಿ ಮೀನುಗಾರಿಕಾ ದೋಣಿ ಪಲ್ಟಿಯಾಗಿದೆ. ನಾಡ ದೋಣಿಯಲ್ಲಿ ಮೀನುಗಾರರು ಮೀನುಗಾರಿಕೆಯಲ್ಲಿ ತೊಡಗಿದ್ದ ಸಂದರ್ಭದಲ್ಲಿ ಅಲೆಗಳ ರಭಸಕ್ಕೆ ದೋಣಿ ಅಡಿ ಮೇಲಾಗಿ ಪಲ್ಟಿಯಾಗಿದೆ.
ಈ ದೋಣಿ ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟಿತ್ತು. ದೋಣಿಯಲ್ಲಿ 6 ಮಂದಿ ಮೀನುಗಾರರು ಇದ್ದರು.ಅವರನ್ನು ರಕ್ಷಿಸಲಾಗಿದೆ.
ಸಮುದ್ರದ ಅಲೆಗಳ ಹೊಡೆತಕ್ಕೆ ದೋಣಿ ಮಗುಚಿದಾಗ ಅದರಲ್ಲಿದ್ದ ಆಂಧ್ರಪ್ರದೇಶದ ಮೀನುಗಾರರು ಸಮುದ್ರಕ್ಕೆ ಬಿದ್ದಿದ್ದರು. ಅವರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ.

