ಬಂಟ್ವಾಳ: ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ಎಂಬಲ್ಲಿ ಬುಧವಾರ ಸಂಜೆ ಶಾಲಾ ಬಸ್ಸಿನ ಮೇಲೆ ಬ್ರಹತ್ ಗಾತ್ರದ ಮರ ಬಿದ್ದು ಆರು ವರ್ಷದ ವಿದ್ಯಾರ್ಥಿನಿ ಮೃತಪಟ್ಟಿದ್ದು ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆಂದು ಎಂದು ತಿಳಿದು ಬಂದಿದೆ.
ಕಲ್ಲಡ್ಕ ಶ್ರೀರಾಮ ಶಾಲೆಯ ಬಸ್ನಲ್ಲಿ ಸಂಜೆ 5 ಗಂಟೆಗೆ ವಿದ್ಯಾರ್ಥಿಗಳನ್ನು ಮನೆಗೆ ಬಿಡುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.ಬಿಳಿಯೂರಿನ ಚಂದ್ರಹಾಸ ಎಂಬವರ ಪುತ್ರಿ ಚಿರನ್ವಿ (6 ವರ್ಷ) ಮ್ರತಪಟ್ಟ ದುರ್ದೈವಿ, ಬರಿಮಾರು ಗ್ರಾಮದ ಕಲ್ಲೆಟ್ಟಿ ಎಂಬಲ್ಲಿ ಕೆಲವು ವಿದ್ಯಾರ್ಥಿಗಳು ಬಸ್ನಿಂದ ಇಳಿದಿದ್ದರು. ಅಲ್ಲಿಂದ ಹಿಂತಿರುಗುವಾಗ ರಸ್ತೆ ಪಕ್ಕದ ಭಾರಿ ಗಾತ್ರದ ಮರವೊಂದು ಬಸ್ಸಿನ ಮೇಲೆ ಅಡ್ಡವಾಗಿ ಮುರಿದು ಬಿದ್ದಿದ್ದುದರಿಂದ ಈ ಅವಘಡ ಸಂಭವಿಸಿದೆ ಇದರಿಂದಾಗಿ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಪೋಲಿಸರು ಹಾಗೂ ಸ್ಥಳೀಯರು ಧಾವಿಸಿ ಗಾಯಾಳು ವಿದ್ಯಾರ್ಥಿಗಳನ್ನು ಕೂಡಲೇ ವಿವಿಧ ಆಸ್ಪತ್ರೆಗಳಿಗೆ ಸಾಗಿಸಿದರು. ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳೀಯರ ಸಹಕಾರದಲ್ಲಿ ಮರ ತೆರವುಗೊಳಿಸಲಾಗುತ್ತಿದೆ ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಲಾಯಿತು

