ಕಾಸರಗೋಡು: ಸಂಶೋಧಕ, ಶಿಕ್ಷಣ ತಜ್ಞ ಹಾಗೂ ವಿದ್ವಾಂಸರಾದ ಡಾ. ಬೆಟ್ಟಪ್ಪ ಕ. ಅವರು ಅಂತರ್ರಾಜ್ಯ ‘ಕನ್ನಡ ಪಯಸ್ವಿನಿ ಶಿಕ್ಷಣ ರತ್ನ ಅಚೀವ್ಮೆಂಟ್ ಅವಾರ್ಡ್–2026’ಗೆ ಆಯ್ಕೆಯಾಗಿದ್ದಾರೆ.
ಜುಲೈ 26ರಂದು ಕನ್ನಡ ಭವನದಲ್ಲಿ ನಡೆಯಲಿರುವ ‘ರಜತ ಸಂಭ್ರಮ’ ಸಮಾರೋಪ ಕಾರ್ಯಕ್ರಮ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್.ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ.ಕೆ. ವಾಮನ್ ರಾವ್ ಬೇಕಲ್ ಅವರು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

