ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ದ.ಕ.ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ತುರ್ತು ಪರಿಸ್ಥಿತಿ ಎದುರಾದಲ್ಲಿ ಜಿಲ್ಲಾಡಳಿತದ ಸಹಾಯವಾಣಿ 1077 ಅಥವಾ 0824-2442590 ಸಂಪರ್ಕಿಸುವಂತೆ ಸೂಚಿಸಲಾಗಿದೆ. ಜಿಲ್ಲಾಡಳಿತ ಹಾಗೂ ಹವಾಮಾನ ಇಲಾಖೆಯ ಮುಂದಿನ ಸೂಚನೆಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

