ಉಡುಪಿ : ಉದ್ಯಮಿ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ಸಂಭವಿಸಿದೆ.
ಕೊಲೆಯಾದ ಡೇವಿಡ್ ಡಿಸೋಜಾ ಮುದರಂಗಡಿ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರಾಗಿದ್ದರು. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ತಕ್ಷಣವೇ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮುದರಂಗಡಿ ಪೇಟೆಯಲ್ಲಿರುವ ಡೇವಿಡ್ ಅವರ ಕಚೇರಿಯ ಬಳಿ ಇಂದು ಮಧ್ಯಾಹ್ನ 3 ಗಂಟೆಗೆ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಅತೀ ಹತ್ತಿರದಿಂದ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ, ಕೂಡಲೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮ್ರತಪಟ್ಟಿದ್ದಾರೆ , ಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಹತ್ಯೆಗೆ ವೈಯಕ್ತಿಕ ದ್ವೇಷ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಹತ್ಯೆಗೈದು ತಲೆಮರೆಸಿಕೊಂಡಿರುವ ಹಂತಕರ ಪತ್ತೆಗಾಗಿ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

