ಮಂಗಳೂರು: ಇಸ್ಕಾನ್ ಮಂಗಳೂರು ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವವನ್ನು ಸೆಪ್ಟೆಂಬರ್ 3 ಮತ್ತು 4ರಂದು ಪಿಲಿಕುಳ ಸ್ಕೌಟ್ ಭವನದಲ್ಲಿ ಅತ್ಯಂತ ವಿಜೃಂಭಣೆಯಿಂದ ಆಯೋಜಿಸಲಾಗಿದೆ. ಈ ಮಹೋತ್ಸವದ ಅಂಗವಾಗಿ ಆಗಸ್ಟ್ 29 ಹಾಗೂ ಸೆಪ್ಟೆಂಬರ್ 3, 4 ಮತ್ತು 5ರಂದು ವಿವಿಧ ಭಕ್ತಿಮಯ, ಸಾಂಸ್ಕೃತಿಕ ಹಾಗೂ ಪ್ರತಿಭಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ಪ್ರೀ-ಕೆ.ಜಿ., ಎಲ್.ಕೆ.ಜಿ., ಯು.ಕೆ.ಜಿ.ಯಿಂದ ಪದವಿ ವಿದ್ಯಾರ್ಥಿಗಳವರೆಗೆ ವಿವಿಧ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿದ್ದು, ವಿದ್ಯಾರ್ಥಿಗಳಷ್ಟೇ ಅಲ್ಲದೆ ಎಲ್ಲಾ ವಯೋಮಾನದ ಸಾರ್ವಜನಿಕರೂ ಸಹ ಭಾಗವಹಿಸಲು ಅವಕಾಶವಿದೆ. ಭಕ್ತಿ, ಪ್ರತಿಭೆ ಮತ್ತು ಸಂಸ್ಕೃತಿಯನ್ನು ಒಂದೇ ವೇದಿಕೆಯಲ್ಲಿ ಅನಾವರಣಗೊಳಿಸುವ ಈ ಸ್ಪರ್ಧೆಗಳು ಶ್ರೀಕೃಷ್ಣನ ಕೃಪೆಗೆ ಪಾತ್ರರಾಗಲು ಮತ್ತು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ಅವಕಾಶವಾಗಿವೆ.

ಭಕ್ತಾದಿಗಳು, ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಕುಟುಂಬ ಸಮೇತರಾಗಿ ಆಗಮಿಸಿ ಎರಡು ದಿನಗಳ ಕಾಲ ನಡೆಯಲಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವದ ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ವೈಭವವನ್ನು ಕಣ್ತುಂಬಿಕೊಳ್ಳುವಂತೆ ಇಸ್ಕಾನ್ ಮಂಗಳೂರು ವತಿಯಿಂದ ಹೃತ್ಪೂರ್ವಕ ಆಹ್ವಾನಿಸಲಾಗಿದೆ.

ಸ್ಪರ್ಧೆಗಳಲ್ಲಿ ಭಾಗವಹಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಕಟಣೆಯಲ್ಲಿರುವ QR ಕೋಡ್ ಅನ್ನು ಸ್ಕ್ಯಾನ್ ಮಾಡಿ ನೋಂದಾಯಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 7483254181 ಹಾಗೂ 9482206020 ಸಂಖ್ಯೆಗಳನ್ನು ಸಂಪರ್ಕಿಸಬಹುದು.

ಸ್ಥಳ: ಪಿಲಿಕುಳ ಸ್ಕೌಟ್ ಭವನ, ಮಂಗಳೂರು.

