ಮಂಗಳೂರು: ಜೆಪ್ಪಿನಮೊಗರು ಮನೆಯೊಂದರಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆಯ ಬಾಗಿಲಿನ ಬೀಗ ಮುರಿದು ಕಪಾಟಿನಲ್ಲಿದ್ದ 14 ಗ್ರಾಂ ಚಿನ್ನದ ಸರ, ತಲಾ 2 ಗ್ರಾಂ ತೂಕ ಇರುವ 2 ಉಂಗುರ ಹಾಗೂ 25.000/- ನಗದು ಹಣವನ್ನು ಕಳ್ಳತನ ಮಾಡಿರುವ ಮಹಾರಾಷ್ಟ್ರದ ಸಾಂಗ್ಲಿ ಮೂಲದ ಸಮಧನ ಸಕಹರಿ ನರಳೆ ( 26 ವರ್ಷ) ಎಂಬಾತನನ್ನು ತಲಪಾಡಿ ಬಳಿಯ ಬಸ್ ಸ್ಟ್ಯಾಂಡ್ ಬಳಿ ಇರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಆರೋಪಿಯನ್ನು ಕಂಕನಾಡಿ ಪೋಲಿಸರು ವಶಕ್ಕೆ ಪಡೆದುಕೊಳ್ಳಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಕಳವು ಮಾಡಿರುವ ಸೊತ್ತುಗಳನ್ನು, ಕೃತ್ಯಕ್ಕೆ ಮಾಡಲು ಉಪಯೋಗಿಸಿದ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ
.

