ಮಂಗಳೂರು : ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಪೊಲೀಸರು ಬಂಧಿಸಿದ್ದಾರೆ.
ವೇಣೂರು ಪೊಲೀಸ್ ಠಾಣಾ ಅಕ್ರ 71/2008, ಕಲಂ:457 380 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯಾದ ಮಹಮ್ಮದ್ ಶರೀಫ್ ವೇಣೂರು ಠಾಣಾ ಸಿಬ್ಬಂದಿಗಳಾದ ಎಎಸ್ ಐ ಬೆಣ್ಣಿಚನ್ ,ಪಿಸಿ ಬಸವರಾಜ್ ಮತ್ತು ಬೆಳ್ತಂಗಡಿ ಉಪ ವಿಭಾಗ ಕಚೇರಿಯ ಸಿಬ್ಬಂದಿ ಪ್ರವೀಣ್.ಎಂ, ಅವರುಗಳ ತಂಡ ದಸ್ತಗಿರಿ ಮಾಡಿ, ಮಾನ್ಯ ಬೆಳ್ತಂಗಡಿ ನ್ಯಾಯಾಧೀಶರ ಸಮ್ಮುಖದಲ್ಲಿ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

