ಮಂಗಳೂರು: ಕಸ್ತೂರ್ಬಾ ಮೆಡಿಕಲ್ ಕಾಲೇಜು ಹಾಗೂ ಕೆ.ಎಸ್.ಹೆಗಡೆ ಮೆಡಿಕಲ್ ಅಕಾಡೆಮಿಯ ಇಎನ್ಟಿ ವಿಭಾಗಗಳ ಜಂಟಿ ಆಶ್ರಯದಲ್ಲಿ ‘SEOCON-2026’ ಅಂತರರಾಷ್ಟ್ರೀಯ ಸಮ್ಮೇಳನ ಆ.20ರಿಂದ 23ರವರೆಗೆ ಮಂಗಳೂರಿನಲ್ಲಿ ನಡೆಯಲಿದೆ ಎಂದು ಸಂಘಟನಾ ಅಧ್ಯಕ್ಷ ಡಾ.ದೇವಿಪ್ರಸಾದ್ ಡಿ. ತಿಳಿಸಿದ್ದಾರೆ.
ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಸೊಸೈಟಿ ಆಫ್ ಎಂಡೋಸ್ಕೋಪಿಕ್ ಒಟೋ-ರೈನೋ-ಲ್ಯಾರಿಂಗೋಲಜಿಯ ನಾಲ್ಕನೇ ಅಂತರರಾಷ್ಟ್ರೀಯ ಸಮ್ಮೇಳನವಾಗಿದೆ. ಅವತಾರ್ ಹೋಟೆಲ್ ನ ಕನ್ವೆನ್ಷನ್ ಸೆಂಟರ್ನಲ್ಲಿ ನಡೆಯುವ ಸಮ್ಮೇಳನದಲ್ಲಿ 400ಕ್ಕೂ ಹೆಚ್ಚು ಪ್ರತಿನಿಧಿಗಳು ಹಾಗೂ 100ಕ್ಕೂ ಅಧಿಕ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ತಜ್ಞರು ಭಾಗವಹಿಸಲಿದ್ದಾರೆ.

ಇಎನ್ಟಿ ಶಸ್ತ್ರಚಿಕಿತ್ಸೆಯ ಸಂಶೋಧನೆ, ನಾವೀನ್ಯತೆ, ಎಂಡೋಸ್ಕೋಪಿಕ್ ಸರ್ಜರಿ, ಕಾಕ್ಲಿಯರ್ ಇಂಪ್ಲಾಂಟ್, ಸ್ಕಲ್ ಬೇಸ್ ಸರ್ಜರಿ ಹಾಗೂ AI ತಂತ್ರಜ್ಞಾನ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ನೇರ ಶಸ್ತ್ರಚಿಕಿತ್ಸೆ, ಉಪನ್ಯಾಸ ಹಾಗೂ ತಜ್ಞರ ಸಂವಾದಗಳು ಸಮ್ಮೇಳನದ ಪ್ರಮುಖ ಆಕರ್ಷಣೆಯಾಗಿವೆ.
ಆ.21ರಂದು ಸಂಜೆ 7ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಪದ್ಮಶ್ರೀ ಪುರಸ್ಕೃತ ಖ್ಯಾತ ಇಎನ್ಟಿ ಹಾಗೂ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸಕ ಡಾ.ಮಿಲಿಂದ್ ವಿ. ಕಿರ್ತನೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಡಾ.ವಾದೀಶ ಭಟ್ ಉಪಸ್ಥಿತರಿದ್ದರು.

