ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ವೇಣೂರು ನಿವಾಸಿ ಜಮಾಲುದ್ದೀನ್ ಎಂಬಾತನ ರಿಕ್ಷಾದಲ್ಲಿ 14 ವರ್ಷದ ಬಾಲಕಿ ಕೆಲವು ತಿಂಗಳುಗಳಿಂದ ಶಾಲೆಗೆ ತೆರಳಿ ಬರುತ್ತಿದ್ದಳು. ಈ ಸಂದರ್ಭದಲ್ಲಿ ಆರೋಪಿ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದನೆಂದು ಆರೋಪಿಸಲಾಗಿದೆ. ಬಾಲಕಿ ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದಾಗ ಆರೋಪಿ ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಇದರಿಂದ ಭಯಗೊಂಡ ಬಾಲಕಿ ಈ ವಿಚಾರವನ್ನು ಯಾರಿಗೂ ತಿಳಿಸಿರಲಿಲ್ಲ.

ಆರೋಪಿಯು ಆಗಸ್ಟ್ 13 ರಂದು ಸಂಜೆ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಅಲ್ಲಿಗೆ ತೆರಳಿ ಬೆದರಿಸಿ ಅತ್ಯಾಚಾರವೆಸಗಿದ್ದಾನೆ, ಎಂಬುದಾಗಿ ಸಂತ್ರಸ್ಥ ಬಾಲಕಿ ದಿನಾಂಕ 15ರಂದು ನೀಡಿದ ದೂರಿನ ಮೇರೆಗೆ, ವೇಣೂರು ಪೊಲೀಸ್ ಠಾಣಾ ಅ.ಕ್ರ: 56/2026 ಕಲಂ: 75(2), 64(1), 65(1), 351(3) BNS 2023 ಮತ್ತು ಕಲಂ: 4(2), 8, 12 ಪೋಕ್ಸೋ ಕಾಯಿದೆ- 2012 ರಂತೆ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ದಿನಾಂಕ 15 ರಂದು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಮಾನ್ಯ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

