ಹೆಬ್ರಿ: ಉಡುಪಿ ಜಿಲ್ಲೆಯ ಶಿರ್ವದಲ್ಲಿ ಉದ್ಯಮಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿದ್ದ ಬಿಹಾರ ಮೂಲದ ಮುಂಬೈ ನಿವಾಸಿ ಅನುಜ್ ಪಾಟೀಲ್ (35) ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಹೆಬ್ರಿ ತಾಲೂಕಿನ ಸೋಮೇಶ್ವರದಲ್ಲಿ ನಡೆದಿದೆ.
ತನಿಖೆಯ ನಿಮಿತ್ತ ಅನುಜ್ ಪಾಟೀಲ್ನನ್ನು ಪೊಲೀಸ್ ವಾಹನದಲ್ಲಿ ಕರೆತರವ ವೇಳೆ ಸೋಮೇಶ್ವರದಲ್ಲಿ ಮೂತ್ರ ವಿಸರ್ಜನೆಗಾಗಿ ವಾಹನದಿಂದ ಇಳಿದ ಆರೋಪಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಕೊಲ್ಲೂರು ಠಾಣೆಯ ಪಿಎಸ್ಐ ಅವರ ಬಳಿಯಿದ್ದ ಆಯುಧವನ್ನು ಕಸಿದುಕೊಂಡ ಆರೋಪಿ ಪೊಲೀಸರತ್ತ ಗುಂಡು ಹಾರಿಸಲು ಮುಂದಾಗಿದ್ದಾನೆ ಎಂದು ತಿಳಿದುಬಂದಿದೆ. ಪರಿಸ್ಥಿತಿ ನಿಯಂತ್ರಿಸಲು ಹಾಗೂ ಕಾರ್ಯಾಚರಣೆಯಲ್ಲಿದ್ದ ಪೊಲೀಸರ ಸುರಕ್ಷತೆಗಾಗಿ ಕುಂದಾಪುರ ಠಾಣೆಯ ಪಿಎಸ್ಐ ನಂಜ ನಾಯ್ಕ್ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.
ಗುಂಡೇಟಿನಿಂದ ಗಾಯಗೊಂಡ ಅನುಜ್ ಪಾಟೀಲ್ನನ್ನು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ಡೇವಿಡ್ ಡಿಸೋಜಾ ಹತ್ಯೆ ಪ್ರಕರಣದಲ್ಲಿ ಸುಪಾರಿ ಕಿಲ್ಲರ್ಗಳನ್ನು ಕಳುಹಿಸಿದ್ದ ಆರೋಪ ಅನುಜ್ ಪಾಟೀಲ್ ವಿರುದ್ಧವಿದ್ದು ಪ್ರಕರಣದ ತನಿಖೆ ಮುಂದುವರಿದಿದೆ.

