ಮಂಗಳೂರು : ಚಂದ್ರದರ್ಶನದ ಆಧಾರದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಈದ್ ಮಿಲಾದ್ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಾಳೆ (ಆಗಸ್ಟ್ 25) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಸರ್ಕಾರದ ಹಿಂದಿನ ಪಟ್ಟಿಯಂತೆ ಆಗಸ್ಟ್ 26 ರಂದು ರಜೆ ಇತ್ತು, ಆದರೆ ಚಂದ್ರಮಾನ ದಿನಾಂಕ ಬದಲಾದ ಕಾರಣ ರಜೆಯನ್ನು ಆಗಸ್ಟ್ 25 ಕ್ಕೆ ಬದಲಾಯಿಸಲಾಗಿದೆ.
ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಆಗಸ್ಟ್ 25ರಂದು ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಕಚೇರಿಗಳು ಮತ್ತು ರಾಜ್ಯ ಸರ್ಕಾರದ ಅಧೀನ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ದ.ಕ. ಜಿಲ್ಲಾಧಿಕಾರಿಗಳ ಕೊರಿಕೆಯಂತೆ ಮನವಿಯನ್ನು ಪರಿಗಣಿಸಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಈ ಸಂಬಂಧ ಸರ್ಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್. ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಆದರೆ, ಈಗಾಗಲೇ ನಿಗದಿಯಾಗಿರುವ ರಾಜ್ಯ ಹಾಗೂ ರಾಷ್ಟ್ರಮಟ್ಟದ ಪರೀಕ್ಷೆಗಳಿಗೆ ಈ ರಜೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

