ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಲ್ಲೇಗ ಸಮೀಪದ ಮುರ ನಿವಾಸಿ ಹರ್ಷದ್ ಎಂಬವರು ದುರಂತವಾಗಿ ಸಾವನ್ನಪ್ಪಿದ್ದಾರೆ.

ಮೃತ ಯುವಕ ಹರ್ಷದ್ ಅವರು ಕಲ್ಲೇಗ ಜುಮಾ ಮಸೀದಿ ಜಮಾಅತ್ಗೆ ಒಳಪಟ್ಟ ಮುರ ನಿವಾಸಿ, ಮರ್ಹೂಮ್ ರಝಾಕ್ ಸಾಹೇಬ್ ಅವರ ಪುತ್ರ ಹಾಗೂ ಇರ್ಷಾದ್ ಅವರ ಸಹೋದರ. ಇವರು ನೆಹರು ನಗರದಲ್ಲಿರೋ ಶಾಪ್ ನಲ್ಲಿ ಉದ್ಯೋಗಿಯಾಗಿದ್ದರು.

ಇಂದು ಪರ್ಲೋಟು ಸಮೀಪ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಹರ್ಷದ್ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

