ಮಂಗಳೂರು: ಮಣಿಪಾಲ ಆರೋಗ್ಯ ಕಾರ್ಡ್ 2026ಕ್ಕೆ ನೋಂದಣಿ ಮಾಡಿಕೊಳ್ಳಲು ಆಗಸ್ಟ್ 31 ಕೊನೆಯ ದಿನವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮಾಹೆ ಮಂಗಳೂರು ಕ್ಯಾಂಪಸ್ನ ಸಹ-ಕುಲಾಧಿಪತಿ ಡಾ. ದಿಲೀಪ್ ಜಿ. ನಾಯಕ್ ಕರೆ ನೀಡಿದರು.
ನಗರದ ಓಷನ್ ಪರ್ಲ್ ಹೋಟೆಲ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 26 ವರ್ಷಗಳಿಂದ ಮಣಿಪಾಲ ಆರೋಗ್ಯ ಕಾರ್ಡ್ ಮೂಲಕ ಜನರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲಾಗುತ್ತಿದೆ. ಪ್ರಸ್ತುತ ಕರ್ನಾಟಕ ಮತ್ತು ಕೇರಳದಲ್ಲಿ ಸುಮಾರು 6.5 ಲಕ್ಷ ಸದಸ್ಯರು ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

ಕೆಎಂಸಿ ಆಸ್ಪತ್ರೆ ಅತ್ತಾವರದ ವೈದ್ಯಕೀಯ ಅಧೀಕ್ಷಕ ಡಾ. ಚಕ್ರಪಾಣಿ ಎ. ಮಾತನಾಡಿ, ವೈಯಕ್ತಿಕ ಸದಸ್ಯತ್ವ ₹350, ಕೌಟುಂಬಿಕ ಸದಸ್ಯತ್ವ ₹700 ಹಾಗೂ ಕೌಟುಂಬಿಕ ಪ್ಲಸ್ ಸದಸ್ಯತ್ವ ₹900ಕ್ಕೆ ಲಭ್ಯವಿದೆ ಎಂದು ಮಾಹಿತಿ ನೀಡಿದರು. ನೋಂದಣಿಯ ನಂತರದ ತಿಂಗಳ 15ರಿಂದ ಪ್ರಯೋಜನಗಳು ಜಾರಿಗೆ ಬರಲಿದ್ದು, 2027ರ ಆಗಸ್ಟ್ 15ರವರೆಗೆ ಕಾರ್ಡ್ ಮಾನ್ಯವಾಗಿರುತ್ತದೆ ಎಂದರು.
ಕೆಎಂಸಿ ಆಸ್ಪತ್ರೆ ಅತ್ತಾವರದ ಉಪ ವೈದ್ಯಕೀಯ ಅಧೀಕ್ಷಕ ಡಾ. ದೀಪಕ್ ಮಡಿ ಮಾತನಾಡಿ, ಆರೋಗ್ಯ ಕಾರ್ಡ್ ಮೂಲಕ ವೈದ್ಯರ ಸಮಾಲೋಚನೆಗೆ ಶೇ.50ರವರೆಗೆ, ಪ್ರಯೋಗಾಲಯ ಪರೀಕ್ಷೆಗಳಿಗೆ ಶೇ.20, ರೇಡಿಯಾಲಜಿ ಪರೀಕ್ಷೆಗಳಿಗೆ ಶೇ.20, OP ಔಷಧಿಗಳಿಗೆ ಶೇ.10 ಹಾಗೂ ಒಳರೋಗಿ ಬಿಲ್ಗೆ ಶೇ.25ರವರೆಗೆ ರಿಯಾಯಿತಿ ಲಭ್ಯವಿದೆ ಎಂದು ತಿಳಿಸಿದರು. ಯಾವುದೇ ಗರಿಷ್ಠ ವಯೋಮಿತಿ ಇಲ್ಲದಿರುವುದರಿಂದ ಹಿರಿಯ ನಾಗರಿಕರಿಗೂ ಈ ಯೋಜನೆ ಸಹಕಾರಿಯಾಗಿದೆ ಎಂದರು.

ಮಣಿಪಾಲ ಆರೋಗ್ಯ ಕಾರ್ಡ್ ಅನ್ನು ಕೆಎಂಸಿ ಆಸ್ಪತ್ರೆ ಅತ್ತಾವರ, ದುರ್ಗಾ ಸಂಜೀವಿನಿ ಮಣಿಪಾಲ ಆಸ್ಪತ್ರೆ ಕಟೀಲು ಹಾಗೂ ದಕ್ಷಿಣ ಕನ್ನಡ ಮತ್ತು ಉತ್ತರ ಕೇರಳದ ಅಧಿಕೃತ ಏಜೆಂಟ್ಗಳ ಮೂಲಕ ಪಡೆಯಬಹುದು. ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ 7022078002 ಅಥವಾ 0824-2285214 ಸಂಪರ್ಕಿಸಬಹುದು.
ಪತ್ರಿಕಾಗೋಷ್ಠಿಯಲ್ಲಿ ಅಪರೇಷನ್ಸ್ ವಿಭಾಗದ ಗ್ರೂಪ್ ಮ್ಯಾನೇಜರ್ ರವಿರಾಜ್ ಹಾಗೂ ಕೆಎಂಸಿ ಆಸ್ಪತ್ರೆ ಅತ್ತಾವರದ ಮಾರುಕಟ್ಟೆ ವಿಭಾಗದ ಸಹಾಯಕ ವ್ಯವಸ್ಥಾಪಕ ಗಣೇಶ್ ಹೆಗ್ಡೆ ಉಪಸ್ಥಿತರಿದ್ದರು.

